ಉಡುಪಿ:ಕರಾವಳಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಇಂಬು ನೀಡಿದ ರಾಜ್ಯ ಸರ್ಕಾರ :ಎಂ.ಎ ಗಫೂರ್

ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]