“ಯಕ್ಷಗಾನ ಕಲಾವಿದರು ಸಲಿಂಗಿಗಳು” ಎಂಬ ಬಿಳಿಮಲೆ ಹೇಳಿಕೆಗೆ ವ್ಯಾಪಕ ಆಕ್ರೋಶ

ಉಡುಪಿ: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ಅವರು ನೀಡಿರುವ ಹೇಳಿಕೆ ಇದೀಗ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಯಕ್ಷಗಾನ ಅಕಾಡೆಮಿ ರಾಜ್ಯಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಅವರು ಹೇಳಿಕೆ ನೀಡಿದ್ದು ತಪ್ಪು. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಕ್ಷಗಾನದಲ್ಲಿ ಒಳ್ಳೆಯವರು ಮತ್ತು ಕೆಟ್ಟವರೂ ಇದ್ದಾರೆ. ಆದರೆ ಬಿಳಿಮಲೆಯಂತಹ ಮೇಧಾವಿ ವಿದ್ವಾಂಸರು ಈ ರೀತಿ ಹೇಳಬಾರದಿತ್ತು ಎಂದು ಹೇಳಿದ್ದಾರೆ. ಬಿಳಿಮಲೆಯ ಹೇಳಿಕೆಯ ಬಗ್ಗೆ […]
ಪೆರ್ಡೂರಿನ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ.

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪೆರ್ಡೂರಿನ ಕುಂಬಾರರ ಗುಡಿಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಾಲು ಅವರಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷ ಯು. ಟಿ. ಖಾದರ್, ರಾಜ್ಯ […]
ನ.25 ರಂದು ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ; ನಗರದಾದ್ಯಂತ ಬಿಗಿ ಭದ್ರತೆ!

ಅಯೋಧ್ಯೆ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟ ಪ್ರಕರಣದ ಬೆನ್ನಲ್ಲೇ ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಎಲ್ಲಾ ಮಸೀದಿಗಳನ್ನು ನಿಯಮಿತವಾಗಿ ತಪಾಸಣೆ ನಡೆಸುವಂತೆ ಮತ್ತು ಸಂದರ್ಶಕರ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ನಗರದಲ್ಲಿರುವ ಎಲ್ಲಾ ಮದರಸಾಗಳು ಮತ್ತು ಮಸೀದಿಗಳಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗಳನ್ನು (ನಮಾಜ್) ತಕ್ಷಣ ನಿಲ್ಲಿಸುವಂತೆ ಕೋರಿ ಬಿಜೆಪಿ ವಕ್ತಾರ ರಜನೀಶ್ ಸಿಂಗ್ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಎಲ್ಲಾ […]
ಆಸ್ಟ್ರೇಲಿಯಾದಲ್ಲಿ ಕಾರು ಡಿಕ್ಕಿ: ಭಾರತ ಮೂಲದ ಗರ್ಭಿಣಿ ಮಹಿಳೆ ಮೃತ್ಯು.

ಮೆಲ್ಬರ್ನ್: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಟು ತಿಂಗಳ ಗರ್ಭಿಣಿ ಹಾಗೂ ಹೊಟ್ಟೆಯೊಳಗಿದ್ದ ಮಗು ಮೃತಪಟ್ಟಿದೆ. ಸಮನ್ವಿತಾ ಧಾರೇಶ್ವರ್ (33) ಮೃತ ಮಹಿಳೆ. ಕಳೆದ ಶುಕ್ರವಾರ ರಾತ್ರಿ 8ರ ಸುಮಾರಿಗೆ ಸಮನ್ವಿತಾ ಅವರು ತಮ್ಮ ಪತಿ ಹಾಗು 3 ವರ್ಷದ ಮಗನೊಂದಿಗೆ ಜರ್ಜ್ ಸೇಂಟ್ ಇನ ಹಾರ್ನ್‌ಸ್ಬಿ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆ ಈ ಕುಟುಂಬ ರಸ್ತೆ ದಾಟುತ್ತಿತ್ತು. ದಾರಿಯಲ್ಲಿ ಬರುತ್ತಿದ್ದ ಕಿಯಾ ಕಾರೊಂದರ ಚಾಲಕ ತನ್ನ ವಾಹನ […]
ಮಂಗಳೂರು: ಡಿ.19 ರಿಂದ “ಕರಾವಳಿ ಉತ್ಸವ”

ಮಂಗಳೂರು: ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಡಿ. 19 ರಿಂದ 2026ರ ಜ.4ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಬೀಚ್ ಉತ್ಸವ, ಕಲಾ ಪರ್ಬ, ಚಿತ್ರ ಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳು ಈ ಸಲದ ಕರಾವಳಿ ಉತ್ಸವದ ವಿಶೇಷ ಆಕರ್ಷಣೆಯಾಗಲಿವೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕರಾವಳಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕರಾವಳಿ ಉತ್ಸವದಲ್ಲಿ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕೃತಿಕ, ಚಿತ್ರಕಲೆ, ಸಾಹಸ ಹಾಗೂ […]