ಉಡುಪಿ:ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ನವಂಬರ್ 19 ರಂದು ಬೆಳಿಗ್ಗೆ 8.00 ಗಂಟೆಗೆ ನಗರದಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದಾರೆ. ನವಂಬರ್ 21 ರಂದು ಸಂಜೆ 4.00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್, ಅಧೀಕ್ಷಕ ಜೀತೇಂದ್ರ ಕುಮಾರ್ ದಯಾಮ ಹಾಗೂ ಮತ್ತಿತರರು ಮುಖ್ಯ […]

ಉಡುಪಿ:ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪ‌ ಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಕಚೇರಿ ಅಥವಾ ಅಭಿವೃದ್ಧಿ […]

ಉಡುಪಿ:ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತಿ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫ್ರೆನ್ಸ್ ಕೊಠಡಿಯಲ್ಲಿ ನಡೆದ ವಿಶ್ವವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಪುರಭವನದಲ್ಲಿ ಪ್ರಸಕ್ತ ಸಾಲಿನ […]

ಉಡುಪಿ:ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, […]