ನ.21ರಿಂದ 23ರವರೆಗೆ ಮಣಿಪಾಲ ಮಾಹೆ 33ನೇ ಘಟಿಕೋತ್ಸವ- 8450 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹೇಳಿದರು. ಮಣಿಪಾಲದ ಮಾಹೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆಯ ಬೆಂಗಳೂರು ಕ್ಯಾಂಪಸ್‌ನಲ್ಲಿ ನವೆಂಬರ್ 29 ಮತ್ತು 30ರಂದು ಎರಡನೇ ಘಟಿಕೋತ್ಸವ ನಡೆಯಲಿದ್ದು, ಇದರಲ್ಲಿ 902 ಮಂದಿ ಪದವಿ ಸ್ವೀಕರಿಸಲಿದ್ದು, 900 ಮಂದಿ ಆನ್‌ಲೈನ್ […]
ಉಡುಪಿ: ಮಹಿಳಾ ಆಯುರ್ವೇದ ವೈದ್ಯರು ಬೇಕಾಗಿದ್ದಾರೆ.

ಉಡುಪಿ: ನಗರದ ಪ್ರತಿಷ್ಠಿತ ಹಿರಿಯ ಆಯುರ್ವೇದ ಔಷಧ ತಯಾರಿಕಾ ಘಟಕವಾದ ಸ್ವದೇಶಿ ಔಷದ ಭಂಡಾರ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಪ್ರೊಡಕ್ಷನ್ ಇಂಚಾರ್ಜ್ ಹುದ್ದೆಗೆ ಮಹಿಳಾ ಆಯುರ್ವೇದ ವೈದ್ಯರು ಬೇಕಾಗಿದ್ದಾರೆ. BAMS ವಿದ್ಯಾರ್ಹತೆ ಹೊಂದಿರಬೇಕು. PF, ESI ಸೌಲಭ್ಯವಿದೆ. ಉಡುಪಿ ಬ್ರಹ್ಮಾವರ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880029841, 9845151070
ಉಡುಪಿ: ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ

ಉಡುಪಿ: ಮಕ್ಕಳಲ್ಲಿ ಇರುವ ಆಸಕ್ತಿಯನ್ನು ಗಮನಿಸಿ ಅದಕ್ಕೆ ಸೂಕ್ತ ಪ್ರೋತ್ಸಾಹವನ್ನು ಪೋಷಕರು ನೀಡಿದಾಗ ಅವರ ಪ್ರತಿಭೆಗಳು ಅನಾವರಣವಾಗಲು ಸಾಧ್ಯ.ಅಲ್ಲದೆ ಪ್ರತಿಭೆಗೆಗಳು ಬೆಳಕಿಗೆ ಬರಬೇಕಾದರೆ ಅವಕಾಶ ಮತ್ತು ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸಿ ಪ್ರತಿಭೆಗಳ ಅನಾವರಣ ಮಾಡುತ್ತಿರುವುದು ಲಾಗನೆಯ ಎಂದು ತೆಂಕನಿಡಿಯೂರು ಮಹಿಳಾ ಮಂಡಳಿಯ ಅಧ್ಯಕ್ಷೆ ಮಮತಾ ಪಿ ಶೆಟ್ಟಿ ಹೇಳಿದರು. ಅವರು ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ […]
ಶಾರ್ಜಾದಲ್ಲಿ ಕನ್ನಡ ಭುವನೇಶ್ವರಿಯ ವೈಭವದ ಜಾತ್ರೆ.

ಅರಬ್ ಸಂಯುಕ್ತ ರಾಷ್ಟ್ರದ ಶಾರ್ಜಾದಲ್ಲಿ ನವೆಂಬರ್ 16ರ ಭಾನುವಾರದಂದು ಕನ್ನಡ ಭುವನೇಶ್ವರಿಯ ಹಬ್ಬವು ಬಹುಸಂಭ್ರಮದಿಂದ ನೆರವೇರಿತು. ಶಾರ್ಜಾದ ವಿಮೆನ್ಸ್ ಯೂನಿಯನ್ ಅಸೋಸಿಯೇಷನ ಸಭಾಂಗಣದಲ್ಲಿ ಶಾರ್ಜಾದ ಕರ್ನಾಟಕ ಸಂಘವು 23ನೇ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡಹಬ್ಬವನ್ನು ಆಯೋಜಿಸಿತ್ತು. ವೈವಿಧ್ಯಮಯ ಸಾಂಸ್ಕೃತಿಕ ಸಾಹಿತ್ಯ ಸ್ಪರ್ಧಾ ಸಂಭ್ರಮದೊಂದಿಗೆ ಸಂಪನ್ನಗೊಂಡ ಕನ್ನಡ ಉತ್ಸವವು ಗಲ್ಫ್ ಪ್ರಾಂತ್ಯದ ನೂರಾರು ಕನ್ನಡಿಗರ ಪಾಲ್ಗೊಳ್ಳುವಿಕೆಯಲ್ಲಿ ಅರ್ಥಪೂರ್ಣವಾಗಿ ಜರಗಿತು.ಚಿಣ್ಣರಿಗಾಗಿ ಛದ್ಮವೇಷ ಸ್ಪರ್ಧೆ, ಪ್ರತಿಭಾಕಾರಂಜಿ, ಸಂಗೀತಸುಧೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನದೊಂದಿಗೆ ವರ್ಣರಂಜಿತವಾಗಿ ಈ ಉತ್ಸವ ಆಯೋಜನೆಗೊಂಡಿತ್ತು. ಈ ಶುಭಸಂದರ್ಭದಲ್ಲಿ ಸಂಸ್ಥೆಯ […]
ಮೀಸಲಾತಿ ಶೇ.75 ಏರಿಸುವ ಯೋಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಮೀಸಲಾತಿ ಶೇಕಡ 50 ಮೀರಬಾರದು ಎಂದು ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರವು ಈ ಮಿತಿಯನ್ನು ದಾಟಿ ಶೇ 10ರಷ್ಟು ಮೀಸಲಾತಿಯನ್ನು ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಕ್ಕೆ ನೀಡಿದೆ. ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯ ಸಿಗುವಂತಾಗಲು ಮೀಸಲಾತಿ ಪ್ರಮಾಣವನ್ನು ಶೇ 70–75ರಷ್ಟಕ್ಕೆ ಹೆಚ್ಚಿಸಬೇಕು ಎಂದುಕೊಂಡಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಎಲ್.ಜಿ. ಹಾವನೂರು ವರದಿಯ ಸುವರ್ಣ ಮಹೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ […]