ಬಂಟ್ವಾಳ: ಸ್ಕೂಟರಿಗೆ ಕಾರು ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ […]

4 ವರ್ಷದೊಳಗಿನ ಮಕ್ಕಳಿಗೆ ದ್ವಿಚಕ್ರ ವಾಹನಗಳಲ್ಲಿ ಹೆಲ್ಮೆಟ್ ಕಡ್ಡಾಯ: ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತೆ ಖಚಿತಪಡಿಸಲು, 2022ರ ಕೇಂದ್ರೀಯ ಮೋಟಾರು ವಾಹನ ನಿಯಮಗಳನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ಯುವಾಗ ವಾಹನದ ವೇಗವನ್ನು 40ಕಿ.ಮೀ.ಗೆ ಸೀಮಿತಗೊಳಿಸಬೇಕು. ಮಕ್ಕಳಿಗೆ ಸೇಫ್ಟಿ ಜಾಕೆಟ್ ಹಾಗೂ ಹೆಲ್ಮಟ್ ಕಡ್ಡಾಯವಾಗಿ ತೊಡಿಸಬೇಕು ಎಂಬ ನಿಯಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಮಕ್ಕಳಿಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲು ನಿರ್ದೇಶಿಸುವಂತೆ ಕೋರಿ ಡಾ.ಅರ್ಚನಾ ಭಟ್ […]

ಉಡುಪಿ:ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿ

ಉಡುಪಿ: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕುತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಈ ಕೆಳಕಂಡಂತೆ ಸಲಹೆಗಳನ್ನು ನೀಡಲಾಗಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗ್ಲೇರಿಯಾ ಫೌಲೇರಿ […]

ಉಡುಪಿ:ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಜಾರಿಯಲ್ಲಿರುವ ಕಾನೂನು ಕಟ್ಟುನಿಟ್ಟಾಗಿ ಪಾಲಿಸಿ : ಮನು ಪಟೇಲ್ ಬಿ.ವೈ

ಉಡುಪಿ: ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ವಿವಿಧ ಭಾಗೀದಾರ ಇಲಾಖೆಗಳು ಕೈಜೋಡಿಸಿ ಈ ರೀತಿಯ ಕಾನೂನು ಬಾಹಿರ ಚಟವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಹೇಳಿದರು. ಅವರು ಬುಧವಾರ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ, ಮಹಿಳೆಯರು […]

ಉಡುಪಿ:ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದಬಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ- 2025 ಅನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯು ಅಚ್ಚುಕಟ್ಟಾಗಿ ಮತ್ತು ಶಿಸ್ತುಬದ್ಧವಾಗಿ ಕ್ರೀಡಾಕೂಟವನ್ನು […]