ಉಡುಪಿ: ಯಕ್ಷಗಾನ ವೇಷದಾರಿ ಈಶ್ವರ ಗೌಡ ಹೃದಯಾಘಾತದಿಂದ ಮೃತ್ಯು

ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು. ಬುಧವಾರ ರಾತ್ರಿ ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಈ ವೇಳೆ ಅವರು ಕೊನೆ ಉಸಿರು ಎಳೆದಿದ್ದರು. ಅದೇ ಮೇಳದಲ್ಲಿ ತಂದೆ ಕೂಡ ವೇಷದಾರಿಯಾಗಿದ್ದರು.ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರಗೌಡ ಪಾತ್ರ ನಿರ್ವಹಿಸಿದ್ದರು. ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು […]
ಉಡುಪಿ:ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ […]
ನ. 21 ರಂದು “ಫುಲ್ ಮೀಲ್ಸ್” ಕನ್ನಡ ಸಿನೆಮಾ ರಾಜ್ಯದ್ಯಂತ ಬಿಡುಗಡೆ.

ಮಂಗಳೂರು: ‘ಫುಲ್ ಮೀಲ್ಸ್’ ಕನ್ನಡ ಸಿನಿಮಾ ನ.21ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟ ಲಿಖಿತ್ ಶೆಟ್ಟಿ ಹೇಳಿದರು. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಈ ಸಿನಿಮಾಕ್ಕೆ ಮೂರು ವರ್ಷ ಕೆಲಸ ಮಾಡಿದ್ದೇವೆ. ಸಿನಿಮಾ ಕಥೆ ಸುಂದರವಾಗಿದ್ದು, ತುಳುನಾಡಿನ ಜನರು ಸಿನಿಮಾ ನೋಡಿ ಹರಸಬೇಕು’ ಎಂದರು. ಚಿತ್ರದ ನಿರ್ದೇಶಕ ವಿನಾಯಕ್ ಮಾತನಾಡಿ, ’ಮದುವೆ ಸಮಾರಂಭಗಳ ಛಾಯಾಗ್ರಾಹಕನೊಬ್ಬ ಪ್ರೀತಿಯ ಬಲೆಗೆ ಬೀಳುವ ಕಥಾಹಂದರವನ್ನು ಹೊಂದಿರುವ ಹಾಸ್ಯಭರಿತ ಚಿತ್ರ ಇದಾಗಿದೆ. ಪ್ರಿ ವೆಡ್ಡಿಂಗ್ ಶೂಟಿಂಗ್ ನಡೆಯುವ ಬೆಂಗಳೂರಿನ […]
ಆಗುಂಬೆಗೆ ಇಂಟರ್ನೆಟ್ ಸಂಪರ್ಕ: ಎನ್ಐಟಿಕೆ ತಂಡದಿಂದ ಕಾರ್ಯ ಯಶಸ್ವಿ!

ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (ಎನ್‌ಐಟಿಕೆ) ಎಂಜಿನಿಯರ್‌ಗಳು ಭಾರಿ ಮಳೆಯಾಗುವ ಆಗುಂಬೆಯಾದ್ಯಂತ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.‘ಆಗುಂಬೆಯಲ್ಲಿ ಆರೋಗ್ಯವನ್ನು ಉತ್ತೇಜಿಸುವುದು’ ಎಂಬ ಶೀರ್ಷಿಕೆ ಅಡಿಯಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರೊ. ಮೋಹಿತ್ ಪಿ. ತಹಿಲಿಯಾನ್ ನೇತೃತ್ವದಲ್ಲಿ ಆಗುಂಬೆಯಲ್ಲಿ ಸುಮಾರು 100 ಇಂಟರ್‌ನೆಟ್ ಸಂಪರ್ಕ ಒದಗಿಸಲಾಗಿದೆ. ಎಲ್ಲರಿಗೂ ಇಂಟರ್‌ನೆಟ್ ಕಾರ್ಯಕ್ರಮದ ಅಡಿಯಲ್ಲಿ ಐಇಇಇ ಕಮ್ಯುನಿಕೇಷನ್ ಸೊಸೈಟಿ ಮತ್ತು ಟಿ4ಜಿ ಒದಗಿಸಿದ ಧನಸಹಾಯದಲ್ಲಿ ಈ ಯೋಜನೆ ಕಾರ್ಯಗತಗೊಳಿಸಲಾಗಿದೆ. ಆಗಾಗ ವಿದ್ಯುತ್ ಅಡಚಣೆ, ಗುಡ್ಡಗಾಡು ಪ್ರದೇಶ ಇಂತಹ […]
ಮುಲ್ಕಿ ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 19 ವರ್ಷಗಳ ಬಳಿಕ ತಲೆಮೆಲೆಸಿಕೊಂಡಿದ್ದ ಆರೋಪಿಯ ಬಂಧನ

ಸುರತ್ಕಲ್: ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಡೂರು ಟಿಬೆಟ್ ಕಾಲನಿ ನಿವಾಸಿ ಪ್ರಸಕ್ತ ಬಜ್ಪೆ ಕಿನ್ನಿಪದವಿನಲ್ಲಿ ನೆಲೆಸಿರುವ ಅಬ್ದುಲ್ ಸಲಾಂ ಅಡ್ಡೂರು (47) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳ ಪೈಕಿ ಪ್ರಮುಖ […]