ಉಡುಪಿ: ACCEA ವತಿಯಿಂದ ಎಂಜಿನಿಯರ್ಸ್ ಮೀಟ್ ಸಾಧಕರಿಗೆ ಸನ್ಮಾನ

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರಿಂಗ್ ಆ್ಯಂಡ್ ಆರ್ಕಿಟೆಕ್ಟ್ಸ್‌(ಎಸಿಸಿಇಎ) ವತಿಯಿಂದ ಎಸ್‌ಕೆಎಫ್ ಎಲಿಕ್ಸರ್ ಮತ್ತು ಎಸ್‌ಕೆಎಫ್ ವುಲ್‌ಕಾನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕಡಿಯಾಳಿ ಓಶಿಯನ್ ಪರ್ಲ್ ಹೊಟೇಲ್‌ನ ಸಭಾಂಗಣದಲ್ಲಿ ಎಂಜಿನಿಯರ್ಸ್ ಮೀಟ್ ಮಂಗಳವಾರ ರಾತ್ರಿ ನಡೆಯಿತು. ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ. ಮೂಡಬಿದ್ರೆ ಮಂಗಳೂರು ಅಧ್ಯಕ್ಷ ಡಾ| ಜಿ. ರಾಮಚಂದ್ರ ಆಚಾರ್ ಮಾತನಾಡಿ, ಜೀವನದಲ್ಲಿ ಉನ್ನತವಾದ ಚಿಂತನೆಗಳನ್ನು ಇರಿಸಿಕೊಂಡು ಸರಳ ಜೀವನ ನಡೆಸುತ್ತಾಾ ಸಮಾಜಮುಖಿಯಾಗಿ ಬದುಕು ಸಾಗಿಸಿದಾಗ ಸಮಾಜಕ್ಕೆೆ ವಿಶಿಷ್ಟವಾದ ಕೊಡುಗೆ ಕೊಡುವುದಕ್ಕೆ ಸಾಧ್ಯವಾಗಲಿದೆ. ಅಲ್ಲದೆ ತಾನು […]

ಕುಂದಾಪುರ:ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರು.

ಕುಂದಾಪುರ : ನವೆಂಬರ್ 19 ರಂದು ಉಡುಪಿ ಜಿಲ್ಲಾ ಮಟ್ಟದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಜಾನಪದ ಗೀತೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆಕಾಂಕ್ಷಾ ಭಾವಗೀತೆ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ […]

ಮೂಡುಬಿದಿರೆ:23ನೇ ರಾಜ್ಯಮಟ್ಟದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ಎರಡು ಕೂಟ ದಾಖಲೆಗಳನ್ನು ಬರೆದ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಇಲ್ಲಿನ ಸ್ವರಾಜ್ ಮೈದಾನದಲ್ಲಿ ಗುರುವಾರ ಮುಕ್ತಾಯಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ‘23ನೇ ಅಂತರ ಕಾಲೇಜು ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಫ್ ಸಹಿತ ಎರಡು ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನ ನಡೆದ ಕ್ರೀಡಾಕೂಟದಲ್ಲಿ ಬೆಂಗಳೂರಿನ ಗಂಗೋತ್ರಿ ನರ್ಸಿಂಗ್ ಕಾಲೇಜಿನ ಆಕಾಶ್ ಬೆನಡಿಕ್ಟ್ ಹಾಗೂ ಆಳ್ವಾಸ್ ಅಲೈಡ್ […]

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವಾರ್ಷಿಕೋತ್ಸವ

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವಾರ್ಷಿಕೋತ್ಸವನ್ನು 18 ನವೆಂಬರ್ 2025 ರಂದು ಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದ ಪ್ರಕಾಶ ಶೆಟ್ಟಿ, ಪ್ರಾಂಶುಪಾಲರು, ಸರಕಾರಿ ಪಿಯು ಕಾಲೇಜು (ಕೆಪಿಎಸ್) ಕೋಟೇಶ್ವರ,ಅವರು ತಮ್ಮ ಭಾಷಣದಲ್ಲಿ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕೇವಲ ಓದಿನಲ್ಲಿ ಮಾತ್ರ ಸೀಮಿತವಾಗದೇ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಸೂಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐ ಎಂ […]

ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ಇನ್ಸ್ ಪೈರ್ ಎಕ್ಸ್ ಕಾರ್ಯಕ್ರಮ

ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ಫೆಸ್ಟ್ ಇನ್ಸ್ ಪೈರ್ ಎಕ್ಸ್ ಕಾರ್ಯಕ್ರಮ ನ.21 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಮತ್ತು ಸಿ. ಡಿ.ಸಿ ಯ ಸದಸ್ಯರಾದ ಶ್ರೀವರ್ಮಾ ಅಜ್ರಿ ಅವರು ಮಾತನಾಡಿ, ಉನ್ನತ ಶಿಕ್ಷಣವನ್ನು ಪಡೆಯುದರ ಜೊತೆಗೆ ನಮ್ಮ ಬದುಕನ್ನು ನಾವೇ ರೂಪಿಸಿಕೊಳ್ಳಬೇಕು. ಅಂಕಗಳನ್ನು ಪಡೆಯುವುದು ಮಾತ್ರವಲ್ಲ, ಅದರ ಜೊತೆಗೆ‌ ಜೀವನಪಾಠಗಳನ್ನೂ ಕಲಿಯಬೇಕಿದೆ. ಬದುಕಿನಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದವರಿಗಿಂತಲೂ ಕನಿಷ್ಠ […]