ಉಡುಪಿ: ನೌಕಾ ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ; ಮಲ್ಪೆಯಲ್ಲಿ ಇಬ್ಬರ ಬಂಧನ

ಉಡುಪಿ: ಭಾರತೀಯ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಮಲ್ಪೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ರೋಹಿತ್ (29) ಹಾಗೂ ಸಂತ್ರಿ (37) ಬಂಧಿತ ಆರೋಪಿಗಳು. ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಸಂಸ್ಥೆಗೆ ಸುಷ್ಮಾ ಮರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ಈ ಇಬ್ಬರು ಕೆಲಸ ಮಾಡುತ್ತಿದ್ದರು. ರೋಹಿತ್‌ ಇನ್ಸುಲೇಟರ್ ಆಗಿ ಈ […]

ನ.28 ರಿಂದ ರಾಜ್ಯಾದ್ಯಂತ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭ.

ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025 ರಿಂದ ರಾಜ್ಯಾದ್ಯಂತ 5000 ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವ ಪ್ರಮುಖ ಹೆಜ್ಜೆಯನ್ನು ಇಡಲಾಗುವುದು ಎಂದು ಹೇಳಿದರು. ಆದಾಗ್ಯೂ, ಸ್ಥಳಾವಕಾಶ ಮತ್ತು ಸರಿಯಾದ ತರಗತಿ ಕೊಠಡಿಗಳ ಕೊರತೆಯಿಂದಾಗಿ ಅಂಗನವಾಡಿಗಳಲ್ಲಿ […]

ಕಾರ್ಕಳ ಕ್ರೈ ಸ್ಟ್ ಕಿಂಗ್: ವಿಶ್ವಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟದ ಭಾರತ ತಂಡಕ್ಕೆ ಕರ್ನಾಟಕದ ಏಕೈಕ ಸ್ಪರ್ಧಿಯಾಗಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಆಯ್ಕೆ.

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಬಾಲಕಿಯರ ವಿಭಾಗದ ವಿಶ್ವವಾಲಿಬಾಲ್ ಪಂದ್ಯಾಟದ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಇವಳು 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ ಅಂತರಾಷ್ಟ್ರೀಯ ಪಂದ್ಯವು ಇದೇ ಡಿಸೆಂಬರ್ ತಿಂಗಳ 4 ರಿಂದ 13 ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದ್ದು ಭಾರತ ತಂಡವನ್ನು ಪ್ರತಿನಿಧಿಸುವ ಕಾರ್ಕಳ ಹೆಮ್ಮೆಯ ಕ್ರೀಡಾಪಟುವಾಗಿದ್ದಾಳೆ. […]

ಬೆಂಗಳೂರಿನಲ್ಲಿ ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ ಪ್ರಕರಣ: ಪೊಲೀಸ್ ಕಾನ್ಸ್‌ಟೇಬಲ್ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಆರೋಪಿ ಗ್ಯಾಂಗ್ ನ್ನು ದರೋಡೆ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ […]

ಶಾಲಾ ಶಿಕ್ಷಕನ ಕಿರುಕುಳ; 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!

ನವದೆಹಲಿ: ಶಾಲಾ ಶಿಕ್ಷಕನ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ 16 ವರ್ಷದ ಶೌರ್ಯ ಪಾಟೀಲ್. ಶಾಲಾ ಶಿಕ್ಷಕರೊಬ್ಬರು ಈತನನ್ನು ಅಪಹಾಸ್ಯ ಮಾಡುತ್ತಿದ್ದರು. ಅಸಭ್ಯವಾಗಿ ನಡೆಸಿಕೊಂಡರೆಂಬ ಆರೋಪ ಕೇಳಿಬಂದಿದೆ. ಶಾಲಾ ಶಿಕ್ಷಕನ ವಿರುದ್ಧ ಬಾಲಕನ ತಂದೆ ಪ್ರದೀಪ್‌ ಪಾಟೀಲ್‌ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೆಂಟ್ರಲ್ ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 2ರಲ್ಲಿ ಟ್ರ್ಯಾಕ್‌ಗೆ ಜಿಗಿದು ಸೇಂಟ್ ಕೊಲಂಬಾ ಶಾಲೆಯ ಶೌರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ […]