ಉಡುಪಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ರೆನೋಲ್ಡ್‌ ಪ್ರವೀಣ್ ಕುಮಾರ್ ಗೆ ಜಯಭೇರಿ

ಉಡುಪಿ: ಉಡುಪಿ ವಕೀಲರ ಸಂಘದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರೆನೋಲ್ಡ್ ಪ್ರವೀಣ್‌ ಕುಮಾ‌ರ್ ಅವರು ಜಯಗಳಿಸಿ ಮೂಲಕ ಎರಡನೇ ಅವಧಿಗೆ ಅಧ್ಯಕ್ಷ ಪಟ್ಟವನ್ನು ಅಲಂಕರಿಸಿದ್ದಾರೆ.ಇವರ ಪ್ರತಿಸ್ಪರ್ಧಿ ಜಯಪ್ರಕಾಶ್ ಕೆದ್ಲಾಯ ಅವರು ಕೊನೆಕ್ಷಣದವರೆಗೂ ಹೋರಾಟ ನೀಡಿ ಅಂತಿಮವಾಗಿ ಸೋಲೊಪ್ಪಿಕೊಂಡರು. ಸುಮಾರು 850 ಸದಸ್ಯರನ್ನೊಳಗೊಂಡ ಉಡುಪಿ ವಕೀಲರ ಸಂಘದ ಚುನಾವಣೆಯ ಮತ ಎಣಿಕೆ ಸಂಜೆ ಐದು ಗಂಟೆಯಿಂದ ರಾತ್ರಿ ಹತ್ತೂವರೆತನಕ ನಡೆಯಿತು. ವಕೀಲರು ಫಲಿತಾಂಶಕ್ಕಾಗಿ ನ್ಯಾಯಾಲಯದ ಆವರಣದಲ್ಲಿ ತುದಿಗಾಲಲ್ಲಿ ನಿಂತಿದ್ದರು.ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಗೆದ್ದರೆ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ […]

ಮಾಹೆಯ 33ನೇ ಘಟಕೋತ್ಸವ: 1648 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ.

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವದ ಮೊದಲ ದಿನದ ಕಾರ್ಯಕ್ರಮವು ಶೈಕ್ಷಣಿಕ ವೈಭವಕ್ಕೆ ಸಾಕ್ಷಿಯಾಯಿತು. ಮಣಿಪಾಲದಲ್ಲಿ ಶುಕ್ರವಾರ ನಡೆದ ಈ ಕಾರ್ಯಕ್ರಮಕ್ಕೆ ಮಾಹೆಯ ಸಹ ಕುಲಾಧಿಪತಿ ಡಾ. ಹೆಚ್. ಎಸ್. ಬಲ್ಲಾಳ್ ಅವರು ಔಪಚಾರಿಕವಾಗಿ ಚಾಲನೆ ನೀಡಿದರು. ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಸಮಿತಿ-2025ರಲ್ಲಿ (ಎನ್‌ಐಆರ್‌ಎಫ್‌) ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ಮಾಹೆಯು ಭಾರತೀಯ ಉನ್ನತ ಶಿಕ್ಷಣದಲ್ಲಿ ತನ್ನ ನಾಯಕತ್ವವನ್ನು ಪುನರುಚ್ಚರಿಸಿದೆ. ಘಟಿಕೋತ್ಸವದ […]

ಎಸಿ ಕೋಚ್’ನಲ್ಲಿ ಮ್ಯಾಗಿ ಮಾಡಿದ ಮಹಿಳೆ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರೀ ವೈರಲ್; ಮಹಿಳೆಗೆ ರೈಲ್ವೆ ಇಲಾಖೆ ಖಡಕ್ ಎಚ್ಚರಿಕೆ.

ಮುಂಬೈ: ಮುಂಬೈ–‌ಮಹಾರಾಷ್ಟ್ರದಲ್ಲಿ ನಡೆದ ವಿಚಿತ್ರ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಭಾರತೀಯ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲೇ ಮಹಿಳೆಯೊಬ್ಬರು ಪವರ್ ಸಾಕೆಟ್‌ಗೆ ಎಲೆಕ್ಟ್ರಿಕ್ ಕೆಟಲ್ ಪ್ಲಗ್ ಮಾಡಿ ಮ್ಯಾಗಿ ಬೇಯಿಸಿರುವುದು, ಬಳಿಕ ಅದೇ ಕೆಟಲ್‌ನಲ್ಲಿ ಚಹಾ ತಯಾರಿಸಲು ಮುಂದಾಗಿರುವುದು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಚಾರ್ಜಿಂಗ್‌ಗಾಗಿ ಮಾತ್ರ ವಿನ್ಯಾಸಗೊಳಿಸಲಾಗಿರುವ ಸಾಕೆಟ್‌ಗಳನ್ನು ಹೆಚ್ಚಿನ ವ್ಯಾಟ್ ಸಾಧನಗಳಿಗೆ ಬಳಸಿರುವುದು ರೈಲು ಪ್ರಯಾಣಿಕರ ಸುರಕ್ಷತೆ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ವೈರಲ್ ವೀಡಿಯೊದಲ್ಲಿ ಆ ಮಹಿಳೆ “ಪ್ರವಾಸದಲ್ಲಿದ್ದರೂ ಅಡುಗೆ ಮನೆಯಿಂದ […]

ದುಬೈ ಏರ್‌ಶೋನಲ್ಲಿ ತೇಜಸ್‌ ಯುದ್ಧ ವಿಮಾನ ಪತನ: ಪೈಲಟ್ ಮೃತ್ಯು.

ದುಬೈ: ದುಬೈ ಏರ್‌ಶೋ ವೇಳೆ ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ‘ತೇಜಸ್‌’ ಶುಕ್ರವಾರ ಪತನಗೊಂಡಿದ್ದು, ಪೈಲಟ್‌ ಮೃತಪಟ್ಟಿದ್ದಾರೆ. ಹಿಂದೂಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌) ಅಭಿವೃದ್ಧಿಪಡಿಸಿರುವ, ಏಕ ಆಸನವುಳ್ಳ ಈ ಯುದ್ಧ ವಿಮಾನವು ಶುಕ್ರವಾರ ಮಧ್ಯಾಹ್ನ ಏರ್‌ಶೋನಲ್ಲಿ ಪ್ರದರ್ಶನ ನೀಡುತ್ತಿದ್ದ ವೇಳೆ, ನೋಡು ನೋಡುತ್ತಿದ್ದಂತೆ ಆಗಸದಿಂದ ಬೆಂಕಿಯುಂಡೆ ನೆಲಕ್ಕೆ ಅಪ್ಪಳಿಸಿ ಪತನಗೊಂಡಿತು. ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ಪೈಲಟ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತವಾಗಿತ್ತು. ದುರ್ಘಟನೆಯಲ್ಲಿ ಪೈಲಟ್‌ ಮೃತಪಟ್ಟಿರುವುದನ್ನು ವಾಯುಪಡೆ ಸಂಜೆಯ […]

ನ.28ಕ್ಕೆ ಪ್ರಧಾನಿ ಮೋದಿ ಉಡುಪಿಗೆ: ಪ್ರಧಾನಿ ಉಡುಪಿ ಭೇಟಿಯ ವೇಳಾಪಟ್ಟಿ ಇಲ್ಲಿದೆ‌!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ ದೆಹಲಿಯ ಏರ್ ಪೋರ್ಟ್ ನಿಂದ ಹೊರಡಲಿದ್ದಾರೆ. ಬೆಳಿಗ್ಗೆ 11.10ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.35ಕ್ಕೆ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಪ್ರಧಾನಿ ಅವರು ರಸ್ತೆ […]