ಉಡುಪಿ:ಮಹಿಳೆಯರ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಕೂಡಲೇ ಸ್ಪಂದಿಸುವುದರೊಂದಿಗೆ, ಕಾನೂನು ಸಲಹೆ ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿದ ಕಾನೂನು ಕ್ರಮಗಳನ್ನು ಕುರಿತು ತಳಮಟ್ಟದಲ್ಲಿಯೇ ಅರಿವು ಮೂಡಿಸುವ ಮೂಲಕ ಮಹಿಳೆಯರ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯ ಸಖಿ ಒನ್ ಸ್ಟಾಪ್ ಹಾಗೂ […]
ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪೂರ್ವಭಾವಿ […]
ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಇವರಿಗೆ “ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ” ಪ್ರಧಾನ

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ […]
ಜಮಾಅತ್ ಇಸ್ಲಾಮೀ ಹಿಂದ್ ನಿಂದ ರಾಷ್ಟ್ರೀಯ ಅಭಿಯಾನ

ಉಡುಪಿ: ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ ‘ನೆರೆಹೊರೆಯವರ ಹಕ್ಕುಗಳು’ ಎಂಬ ಶೀರ್ಷಿಕೆ ಯಡಿ ಹತ್ತುದಿನಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರಂತೆ ಉಡುಪಿ ಜಿಲ್ಲೆಯಾದ್ಯಂತ ವಿವಿಧೆಡೆಗಳಲ್ಲಿ ಇಂದಿನಿಂದ ನ. 30ರವರೆಗೆ ಈ ಅಭಿಯಾನ ನಡೆಯಲಿದೆ ಎಂದು ಜಮಾಅತ್ ಇಸ್ಲಾಮಿ ಹಿಂದ್‌ನ ಉಡುಪಿ ನಗರ ಶಾಖೆ ಅಧ್ಯಕ್ಷ ನಿಸಾರ್ ಅಹಮ್ಮದ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಆದರ್ಶ ನೆರೆಹೊರೆ, ಆದರ್ಶ ಸಮಾಜ ಎಂಬ ಘೋಷ ವಾಕ್ಯದಡಿ ಈ ಬಾರಿಯ ಅಭಿಯಾನ ನಡೆಯಲಿದ್ದು, ನೆರೆಹೊರೆಯವರೊಂದಿಗೆ ಸದ್ವರ್ತನೆ […]
ನ.23ರಂದು ಉಡುಪಿಯಲ್ಲಿ ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ

ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶನದಂತೆ ಯುವಜನಸೇವಾ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನ.23ರಂದು ಬೆಳಿಗ್ಗೆ 9.30ಕ್ಕೆ ಅಸ್ಮಿತಾ ಯುವತಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕ್ರೀಡಾಕೂಟದಲ್ಲಿ 14 ಹಾಗೂ 16ರ ವಯೋಮಿತಿಯೊಳಗಿನ ಯುವತಿಯರು ಭಾಗವಹಿಸಬಹುದು. ನ.22ರೊಳಗೆ ನೋಂದಣಿ ಮಾಡಬಹುದು. ಯಾವುದೇ ನೋಂದಣಿ ಶುಲ್ಕ ಇಲ್ಲ. ಎತ್ತರ ಜಿಗಿತ, ಉದ್ದಜಿಗಿತ, ಬ್ಯಾಕ್ ಥ್ರೋ, ಜಾವೆಲಿನ್ ಥ್ರೋ, […]