ನ.23ರಂದು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಉದ್ಘಾಟನೆ ಕಾರ್ಯಕ್ರಮ ನ.23ರಂದು ಬೆಳಿಗ್ಗೆ 6.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಗುರುರಾಜ್ ಕೆ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಾಸಕ ಯಶ್ ಪಾಲ್ ಸುವರ್ಣ ಅವರು ನೂತನ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್ ಅನ್ನು ಉದ್ಘಾಟಿಸಲಿದ್ದಾರೆ. ಬಳಿಕ ಸೈಕ್ಲೋಥಾನ್ ಆರಂಭವಾಗಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳು, ಅಮೆಚೂರ್ ಸೈಕ್ಲಿಸ್ಟ್ ಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಖಜಾಂಚಿ ದೀಪಕ್ ಕುಮಾರ್ ವೈ., […]
ಸಮಾಜದಲ್ಲಿ ಧನಾತ್ಮಕತೆ ಹೆಚ್ಚಲಿ- ಮಾಣಿಲ ಸ್ವಾಮೀಜಿ

ಉಡುಪಿ: ಸಮಾಜದಲ್ಲಿ ಋಣಾತ್ಮಕ ದೌರ್ಬಲ್ಯ ಕಡಿಮೆಯಾಗಿ ಧನಾತ್ಮಕತೆ ಹೆಚ್ಚಬೇಕು. ಜಗತ್ತು ಭಗವಂತನ ಸಾಮ್ರಾಜ್ಯ ಎನ್ನುವುದನ್ನು ಎಲ್ಲರೂ ಅರಿಯಬೇಕು ಎಂದು ಶ್ರೀ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಪ್ರಯುಕ್ತ ರಾಜಾಂಗಣದಲ್ಲಿ ನಡೆದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಅನುಗ್ರಹ ಸಂದೇಶ ನೀಡಿದರು.ವಿಶ್ವಶಾಂತಿ, ಲೋಕದ ಹಿತಕ್ಕೆ ಸಂತರ ಮನಸ್ಸು ಒಂದಾಗಬೇಕು ಎನ್ನುವ ನೆಲೆಯಲ್ಲಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಹಳದೊಡ್ಡ […]