ವಿಯೆಟ್ನಾಂನಲ್ಲಿ ಭಾರಿ ಮಳೆ, ಪ್ರವಾಹ; 90 ಮಂದಿ ಮೃತ್ಯು.

ಹನೋಯಿ: ಕೇಂದ್ರ ವಿಯೆಟ್ನಾಂನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 90 ಮಂದಿ ಮೃತಪಟ್ಟಿದ್ದಾರೆ ಎಂದು ವಿಕೋಪ ನಿಯಂತ್ರಣ ಸಂಸ್ಥೆ ನೀಡಿದ ಮಾಹಿತಿ ಆಧರಿಸಿ ಇಲ್ಲಿನ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ದಾಖಲೆ ಪ್ರಮಾಣದ ಮಳೆ ಮತ್ತು ಪ್ರಬಲ ‘ಕಾಲ್‌ಮೇಗಿ’ ಚಂಡಮಾರುತದಿಂದಾದ ಮಹಾಪ್ರವಾಹ ಭಾರಿ ಹಾನಿ ಉಂಟು ಮಾಡಿದೆ. ವಿಯೆಟ್ನಾಂನ ಸೆಂಟ್ರಲ್ ಹೈಲ್ಯಾಂಡ್‌ನ ರಸ್ತೆಗಳು, ರೈಲು ಹಳಿಗಳು ಹಲವೆಡೆ ಭೂಕುಸಿತದಿಂದ ನಾಶವಾಗಿದ್ದರೆ, ಮತ್ತೆ ಕೆಲವೆಡೆ ಜಲಾವೃತವಾಗಿವೆ. ಸಾವಿರಾರು ಜನರು […]
ಕುಂದಾಪುರ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಮೃತ್ಯು

ಶಂಕರನಾರಾಯಣ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನ.22ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹುಟ್ಟೂರು ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದು, ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬೆಳಗಾಂಗೆ ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ಹೊರಟಿದ್ದರು. ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೊಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ […]
ಉಡುಪಿ:ಕಳತ್ತೂರು ಶ್ರೀ ಬ್ರಹ್ಮ ಬೈದೇರುಗಳ ಗರಡಿ ಜೀರ್ಣೋದ್ಧಾರ ಕಾರ್ಯ ಪರಿಶೀಲನೆ – ವಿನಯ್ ಕುಮಾರ್ ಸೊರಕೆ ಭೇಟಿ

ಉಡುಪಿ:ಕಾಪು ತಾಲೂಕಿನ ಉಭಯ ಗ್ರಾಮಗಳ ಆರಾಧನಾ ಕೇಂದ್ರವಾದ ಕಳತ್ತೂರು ಶ್ರೀ ಬ್ರಹ್ಮ ಬೈದೇರುಗಳ ಗರಡಿಯ ಜೀರ್ಣೋದ್ಧಾರ ಕಾಮಗಾರಿಯನ್ನು ಪರಿಶೀಲಿಸಲು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷರು, ಕಾಪು ಕ್ಷೇತ್ರದ ಮಾಜಿ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರು 21-11-2025 ರಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಭಕ್ತರು ಮತ್ತು ಜೀರ್ಣೋದ್ಧಾರ ಸಮಿತಿಯ ಮನವಿಯ ಮೇರೆಗೆ ಗರಡಿ ಜೀರ್ಣೋದ್ಧಾರಕ್ಕಾಗಿ ಸರ್ಕಾರದ ವತಿಯಿಂದ ರೂ. 25 ಲಕ್ಷ ಅನುದಾನವನ್ನು ಮಂಜೂರು ಮಾಡಿಸುವ […]
ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ ಲೋಕಾರ್ಪಣೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಈಗಾಗಲೇ ಹಲವು ಬಾರಿ ಜಿಲ್ಲಾಸ್ಪತ್ರೆ ಪೂರ್ಣಗೊಳಿಸುವ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಮುಖ್ಯಮಂತ್ರಿಗಳು […]
ಕಾನೂನು ಬದಲಾದರೂ, ಹಳ್ಳಿಯಲ್ಲಿ ಹುಟ್ಟಿದ ಗಾದೆಗಳು ಸುಳ್ಳಾಗದು – ಪುರುಷೋತ್ತಮ್

ಉಡುಪಿ: ಕಾಲದಿಂದ ಕಾಲಕ್ಕೆ ಕಾನೂನುಗಳು ಬದಲಾಗುತ್ತಿರುತ್ತವೆ. ಅನೇಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಆದರೆ ಹಳ್ಳಿಯಲ್ಲಿ ನಮ್ಮ ಹಿರಿಯರು ಕಟ್ಟಿದ ಗಾದೆ ಮಾತುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಸಿಜೆಎಮ್ ಎಮ್. ಪುರುಷೋತ್ತಮ್ ಅಭಿಪ್ರಾಯಪಟ್ಟಿದ್ದಾರೆ. ಅವರು ಶುಕ್ರವಾರ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ ” ಪೋಕ್ಸೊ ಕಾಯ್ದೆ”ಯ ಮಾಹಿತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ಯಾವುದೇ ಪಿಹೆಚ್‌ಡಿ ಪಡೆಯದಿದ್ದರೂ, ಜೀವನದ ಅನುಭವದ […]