ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ನ.28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನವೆಂಬರ್ 28ರಂದು ಉಡುಪಿ ನಗರ ಠಾಣಾ ವ್ಯಾಪ್ತಿ, ಮಲ್ಪೆ ಠಾಣಾ ವ್ಯಾಪ್ತಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಅವರು ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ.

ಉಡುಪಿ, ನ.25: ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ ಈ ಕೆಳಗಿನಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.ಉಡುಪಿ ನಗರ ವ್ಯಾಪ್ತಿಯೊಳಗಿನ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. […]
ಮಣಿಪಾಲ: ಸುರಕ್ಷಾ ಸುವರ್ಣ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಉಡುಪಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (MAHE), ಮಣಿಪಾಲದ 33ನೇ ಘಟಿಕೋತ್ಸವ ಸಮಾರಂಭದಲ್ಲಿ ಶ್ರೀಮತಿ ಸುರಕ್ಷಾ ಸುವರ್ಣ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಅವರು ಮಣಿಪಾಲ ವಾಣಿಜ್ಯ ಮತ್ತು ಆರ್ಥಶಾಸ್ತ್ರ ಶಾಲೆಯ ಸಹ ಪ್ರಾಧ್ಯಾಪಕ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “ಸ್ತ್ರೀ ಸಬಲೀಕರಣ, ಗ್ರಹಿತ ಸಾಮಾಜಿಕ ಬೆಂಬಲ ಮತ್ತು ಗ್ರಹಿತ ಆರೋಗ್ಯವು ಜೀವನತೃಪ್ತಿಯ ಪೂರ್ವ ಸೂಚಕಗಳಾಗಿ: ಸ್ವಯಂ ಸಹಾಯ ಗುಂಪುಗಳ ಅಂಶಾಧಾರಿತ ಅಧ್ಯಯನ” ಎಂಬ ಶೀರ್ಷಿಕೆಯ ಪ್ರಬಂಧವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶ್ರೀಮತಿ ಸುರಕ್ಷಾ ಸುವರ್ಣ […]
ನವೆಂಬರ್ 27 ರಿಂದ ಡಿಸೆಂಬರ್ 1 ರವರೆಗೆ ಉಡುಪಿಯಲ್ಲಿ ಬೃಹತ್ ಸ್ವದೇಶಿ ಮೇಳ.

ಉಡುಪಿ: ಆತ್ಮನಿರ್ಭರ ಭಾರತ-ಸ್ವದೇಶಿ ಸಂಕಲ್ಪ ಅಭಿಯಾನದ ಅಂಗವಾಗಿ ಬೃಹತ್ ಸ್ವದೇಶಿ ಮೇಳವು ನವೆಂಬರ್ 27ರಿಂದ ದಶಂಬರ 1ರವರೆಗೆ ಉಡುಪಿಯ ದೊಡ್ಡಣ್ಣಗುಡ್ಡೆ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಸ್ವದೇಶಿ ಕೃಷಿ, ಗುಡಿಕೈಗಾರಿಕೆ ಕೌಶಲ, ಆಹಾರ, ನರ್ಸರಿ ಪ್ರದರ್ಶನ ಮತ್ತು ಮಾರಾಟವನ್ನು ಈ ಮೇಳದಲ್ಲಿ ಆಯೋಜಿಸಲಾಗಿದೆ ಗುಡಿ ಕೈಗಾರಿಕೆ ಪ್ರಾತ್ಯಕ್ಷಿಕೆ ಮಳಿಗೆ, ಸ್ವಉದ್ಯೋಗ ಉದ್ಯಮಗಳನ್ನು ಆರಂಭಿಸಲು ಮತ್ತು ಅಭಿವೃದ್ಧಿಪಡಿಸಲು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಮಾರ್ಗದರ್ಶನ, ಸ್ವದೇಶಿ ಸಂಕಲ್ಪ ಅಭಿಯಾನ, ಜಾಗೃತಿ, ಅರ್ಹ ಸಣ್ಣ […]
ಉಡುಪಿ: ನ.28ರಂದು ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ […]