ಕಾರ್ಕಳ ಟೈಗರ್ಸ್ ಮತ್ತು ಹೊಸಸಂಜೆ ಬಳಗದ ಆಶ್ರಯದಲ್ಲಿ ಸಾಲ್ಮರ ಇಂದ್ರಪಸ್ಥ ಸಭಾಂಗಣದಲ್ಲಿ ಸಹಕಾರ ರತ್ನ ಕಡಾರಿ ರವೀಂದ್ರ ಪ್ರಭು ಅವರಿಗೆ ಸನ್ಮಾನ

ಕಾರ್ಕಳ: ಸಮುದಾಯದ ಆಧಾರದಲ್ಲಿ ನಮ್ಮ ಸಂಸ್ಥೆ ಸ್ಥಾಪನೆಯಾಗಿದ್ದರೂ, ನಮ್ಮ ಚಟುವಟಿಕೆ ಇಡೀ ಸಮಾಜಕ್ಕೆ ಸೇರಿದ್ದಾಗಿದೆ. ಸ್ವಸಮಾಜದ ಜೊತೆ ಅನ್ಯಸಮಾಜದ ಪ್ರೀತಿ ವಿಶ್ವಾಸ ಗಳಿಸಲು ಯಶಸ್ವಿಯಾಗಿದ್ದೇವೆ.ಸರ್ವ ಸಮುದಾಯಕ್ಕೆ ಸೇವೆ ಸಲ್ಲಬೇಕೆಂಬ ಆದರ್ಶದೊಂದಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ , ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಪರಿಕರಗಳ ವಿತರಣೆ ದೊಡ್ದ ಮಟ್ಟದಲ್ಲಿ ಮಾಡಿದ್ದೇವೆ . ನಮ್ಮಸಂಸ್ಥೆ ಯ ಸೇವೆಯನ್ನು ಸಮಾಜಕ್ಕೆ ಅರ್ಪಿಸುವಲ್ಲಿ ಸಫಲ ರಾಗಿದ್ದೇವೆ ಎಂದು ರಾಜಾಪುರ […]
ಮಣಿಪಾಲ: ಕಾರ್ಮಿಕ್ ಸಂಸ್ಥೆಯಿಂದ ರಸ್ತೆ ದೀಪದ ಕೊಡುಗೆ; ರಾಜೀವನಗರದಿಂದ ಇಂಡಸ್ಟ್ರಿಯಲ್ ಏರಿಯಾದವರೆಗೆ ರಸ್ತೆ ದೀಪ ಅಳವಡಿಕೆ

ಉಡುಪಿ: ಮಣಿಪಾಲದ ಸೆಮಿಕಂಡಕ್ಟರ್ ತಂತ್ರಜ್ಞಾನ ಸಂಸ್ಥೆ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದ ಅಂಗವಾಗಿ ಜನರ ಸುರಕ್ಷತೆ, ಸೌಕರ್ಯ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಮಣಿಪಾಲದ ರಾಜೀವನಗರದಿಂದ ಇಂಡಸ್ಟ್ರಿಯಲ್ ಏರಿಯಾದವರೆಗೆ ಅಳವಡಿಸಲಾದ ಸಾರ್ವಜನಿಕ ರಸ್ತೆ ದೀಪವನ್ನು ಉದ್ಘಾಟಿಸಲಾಯಿತು. ಮಣಿಪಾಲ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿರೂಪಾಕ್ಷಯ್ಯ ಕುಲಕರ್ಣಿ, ಮಣಿಪಾಲ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ ಪುತ್ರನ್, […]
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪೂರ್ವಭಾವಿ ಗ್ರಾಮ ಸಭೆ: ದೇವಸ್ಥಾನದ ಜೀರ್ಣೋದ್ಧಾರಕ್ಕೆ 25 ಲಕ್ಷ ರೂ. ಅನುದಾನ ಮಂಜೂರು ಮಾಡಲು ಪ್ರಯತ್ನ; ಸೊರಕೆ

ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪೂರ್ವಭಾವಿ ಗ್ರಾಮ ಸಭೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಂಬಳಮನೆ ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಉಮಾಮಹೇಶ್ವರ ಸಭಾಭವನದಲ್ಲಿ ನಡೆಯಿತು.ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗಾಗಿ ಮುಜರಾಯಿ ಇಲಾಖೆಯಿಂದ 25 ಲಕ್ಷ ರೂ. ಅನುದಾನ ಮಂಜೂರು ಮಾಡಲು ಪ್ರಯತ್ನಿಸಲಾಗುವುದು. ಹಾಗೆಯೇ ದೇವಸ್ಥಾನದ ದ್ವಾರದ ಬಾಗಿಲು, ಮೇಲ್ಛಾವಣಿ ಸಹಿತ ಇತರೆ ಕಾಮಗಾರಿಗಳಿಗೆ […]
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ನ.28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನವೆಂಬರ್ 28ರಂದು ಉಡುಪಿ ನಗರ ಠಾಣಾ ವ್ಯಾಪ್ತಿ, ಮಲ್ಪೆ ಠಾಣಾ ವ್ಯಾಪ್ತಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಅವರು ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ.

ಉಡುಪಿ, ನ.25: ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ ಈ ಕೆಳಗಿನಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.ಉಡುಪಿ ನಗರ ವ್ಯಾಪ್ತಿಯೊಳಗಿನ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. […]