ಮಣಿಪಾಲ: ಸುರಕ್ಷಾ ಸುವರ್ಣ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಉಡುಪಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (MAHE), ಮಣಿಪಾಲದ 33ನೇ ಘಟಿಕೋತ್ಸವ ಸಮಾರಂಭದಲ್ಲಿ ಶ್ರೀಮತಿ ಸುರಕ್ಷಾ ಸುವರ್ಣ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಅವರು ಮಣಿಪಾಲ ವಾಣಿಜ್ಯ ಮತ್ತು ಆರ್ಥಶಾಸ್ತ್ರ ಶಾಲೆಯ ಸಹ ಪ್ರಾಧ್ಯಾಪಕ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “ಸ್ತ್ರೀ ಸಬಲೀಕರಣ, ಗ್ರಹಿತ ಸಾಮಾಜಿಕ ಬೆಂಬಲ ಮತ್ತು ಗ್ರಹಿತ ಆರೋಗ್ಯವು ಜೀವನತೃಪ್ತಿಯ ಪೂರ್ವ ಸೂಚಕಗಳಾಗಿ: ಸ್ವಯಂ ಸಹಾಯ ಗುಂಪುಗಳ ಅಂಶಾಧಾರಿತ ಅಧ್ಯಯನ” ಎಂಬ ಶೀರ್ಷಿಕೆಯ ಪ್ರಬಂಧವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶ್ರೀಮತಿ ಸುರಕ್ಷಾ ಸುವರ್ಣ […]
ನವೆಂಬರ್ 27 ರಿಂದ ಡಿಸೆಂಬರ್ 1 ರವರೆಗೆ ಉಡುಪಿಯಲ್ಲಿ ಬೃಹತ್ ಸ್ವದೇಶಿ ಮೇಳ.

ಉಡುಪಿ: ಆತ್ಮನಿರ್ಭರ ಭಾರತ-ಸ್ವದೇಶಿ ಸಂಕಲ್ಪ ಅಭಿಯಾನದ ಅಂಗವಾಗಿ ಬೃಹತ್ ಸ್ವದೇಶಿ ಮೇಳವು ನವೆಂಬರ್ 27ರಿಂದ ದಶಂಬರ 1ರವರೆಗೆ ಉಡುಪಿಯ ದೊಡ್ಡಣ್ಣಗುಡ್ಡೆ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಸ್ವದೇಶಿ ಕೃಷಿ, ಗುಡಿಕೈಗಾರಿಕೆ ಕೌಶಲ, ಆಹಾರ, ನರ್ಸರಿ ಪ್ರದರ್ಶನ ಮತ್ತು ಮಾರಾಟವನ್ನು ಈ ಮೇಳದಲ್ಲಿ ಆಯೋಜಿಸಲಾಗಿದೆ ಗುಡಿ ಕೈಗಾರಿಕೆ ಪ್ರಾತ್ಯಕ್ಷಿಕೆ ಮಳಿಗೆ, ಸ್ವಉದ್ಯೋಗ ಉದ್ಯಮಗಳನ್ನು ಆರಂಭಿಸಲು ಮತ್ತು ಅಭಿವೃದ್ಧಿಪಡಿಸಲು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಮಾರ್ಗದರ್ಶನ, ಸ್ವದೇಶಿ ಸಂಕಲ್ಪ ಅಭಿಯಾನ, ಜಾಗೃತಿ, ಅರ್ಹ ಸಣ್ಣ […]
ಉಡುಪಿ: ನ.28ರಂದು ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ […]
ಕ್ರೀಡೆಯು ದೈಹಿಕ ಶಕ್ತಿಯ ಜೊತೆಗೆ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ : ಡಾ. ಎಚ್ ಎಸ್ ಬಲ್ಲಾಳ್

ಉಡುಪಿ : ಕ್ರೀಡೆಯು ದೈಹಿಕ ಶಕ್ತಿಯ ಜೊತೆಗೆ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಜಯ ಗಳಿಸುವುದೆ ಮುಖ್ಯವಲ್ಲ ಭಾಗವಹಿಸುವಿಕೆಯು ಮುಖ್ಯವಾಗಿದೆ. ಆಸಕ್ತಿ, ಕಠಿನ ಪರಿಶ್ರಮ ಮತ್ತು ಆತ್ಮವಿಶ್ವಾಸಗಳು ಕ್ರೀಡಾಳುಗಳಲ್ಲಿದ್ದರೆ ಮಾತ್ರ ಕ್ರೀಡೆಯಲ್ಲಿ ಹಾಗೂ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಪ್ರೋ ವೈಸ್ ಚಾನ್ಸಲರ್ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು.
ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಉಡುಪಿ ಶಾಖೆಯಲ್ಲಿ ಉದ್ಘಾಟನೆ

ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23 ರಂದು ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು. ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ ಧರ್ಮಗುರು ವಂದನೀಯ ಫಾ| ಚಾರ್ಲ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ತಲ್ಲೂರಿನ ಶಿವಪ್ರಸಾದ್ ಶಿವರಾಮ ಶೆಟ್ಟಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ […]