46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಉದ್ಘಾಟನೆ

ಉಡುಪಿ: ರಂಗಭೂಮಿ ಉಡುಪಿ, ವರ್ಷದಲ್ಲಿ 25ಕ್ಕೂ ಅಧಿಕ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುವ ಮೂಲಕ ಉಡುಪಿಯ ಇತಿಹಾಸ ಪುಟದಲ್ಲಿ ಭದ್ರವಾದ ಸ್ಥಾನ ಪಡೆದಿರುವುದು ನಾವೆಲ್ಲಾ ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಭಾನುವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ಸಂಸ್ಥೆ ಹಮ್ಮಿಕೊಂಡ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಇಂದು ರಂಗಭೂಮಿಯತ್ತ ಸಭಿಕರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕದ ವಿಚಾರ. ನಮ್ಮ ಮಣ್ಣಿನ ಸೊಗಡಾಗಿರುವ ಯಕ್ಷಗಾನ, […]

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕ: ರೈಲ್ವೆ ಪೊಲೀಸರಿಂದ ರಕ್ಷಣೆ.

ಉಡುಪಿ: ಚಲಿಸುತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕರೊಬ್ಬರನ್ನು ಚುರುಕಾಗಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಮಡಗಾಂವ್‌ ರೈಲ್ವೆ ನಿಲ್ದಾಣದಲ್ಲಿ ರವಿವಾರ ನಡೆದಿದೆ. ಸಂಜೆ 7:00 ಸುಮಾರಿಗೆ ಪ್ಲಾಟ್‌ಪಾರಂ ನಂ.1ರಿಂದ ಹೊರಟ ಕೊಂಕಣ ಕನ್ಯಾ ಎಕ್ಸ್‌ಪ್ರೆಸ್ ರೈಲು ಚಲಿಸುತಿದ್ದಂತೆ ಪ್ರಯಾಣಿಕರೊಬ್ಬರು ಇಳಿಯಲು ಪ್ರಯತ್ನಿಸಿದ್ದರು. ಕಾಲು ಜಾರಿ ಅವರು ರೈಲು ಹಾಗೂ ಪ್ಲಾಟ್‌ಫಾರಂ ನಡುವೆ ಬಿದ್ದರು. ಆಗ ಅಲ್ಲೇ ಫ್ಲಾಟ್‌ಫಾರಂ ನಂ1ರ ಬಳಿ ನಿಂತಿದ್ದ ರೈಲ್ವೆ ಪೊಲೀಸ್‌ ಕಾನ್‌ಸ್ಟೇಬರ್ ಕಪಿಲ್ ಸಯಾನಿ ಹಾಗೂ ಹೆಡ್‌ ಕಾನ್‌ಸ್ಟೇಬಲ್‌ […]

ಉಡುಪಿ:ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮ: ರಮೇಶ್ ಕಾಂಚನ್

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 35 ವಾರ್ಡ್ಗಳಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸದಸ್ಯರು ಮತ್ತು ಅಧಿಕಾರಿಗಳು ಮುಂದಾಗಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಸೋಮವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ […]

ಉಡುಪಿ:ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸನ್ಮಾನ್ಯ ಭಾರತದ ಪ್ರಧಾನಮಂತ್ರಿಯವರು ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಶಿಷ್ಠಾಚಾರವನ್ನು ಪಾಲಿಸುವ ಸಲುವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28 ರಂದು ಆದಿಉಡುಪಿಯ ಹೆಲಿಪ್ಯಾಡ್‌ನಿಂದ […]

ನ.28ಕ್ಕೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ: ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ ವಿವರ ಇಲ್ಲಿದೆ.

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಈ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ ಮಾಡಲಾಗಿದೆ. ನ.28ರಂದು ಬೆಳಿಗ್ಗೆ 9ಗಂಟೆಯಿಂದ 3ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ ವಿವರ ಹೀಗಿದೆ:ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಕರಾವಳಿ ಜಂಕ್ಷನ್-ಬನ್ನಂಜೆ-ಶಿರಿಬೀಡು-ಕಲ್ಪಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗಿದೆ.ಮಣಿಪಾಲದಿಂದ ಉಡುಪಿ […]