ನಾಳೆ(ನ.28) ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಉಡುಪಿ ನಗರಕ್ಕೆ ವಾಹನ ಪ್ರವೇಶ ನಿರ್ಬಂಧ.

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಶ್ರೀ ಕೃಷ್ಣಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ನವೆಂಬರ್ 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧಿಸಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸುವ ಕುರಿತಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶ ಹೊರಡಿಸಿದ್ದಾರೆ. ಸಂಚಾರ ನಿಯಮ ಈ ಕೆಳಕಂಡಂತಿದೆ:ಕಾರ್ಯಕ್ರಮಕ್ಕೆ ಬರುವ ವಾಹನಗಳು:ಕುಂದಾಪುರದಿಂದ […]
ಮಣಿಪಾಲ:ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ;ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ!

ಮಣಿಪಾಲ: ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದೆ .ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ. ಸದ್ಯ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.
ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್: ಚಿತ್ರಕಲಾ ಸ್ಪರ್ಧೆಯಲ್ಲಿ ವಿನೀಶ್ ಆಚಾರ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಹೆಬ್ರಿ: ಭಾರತ ಸರ್ಕಾರದ ಇಂಧನ ಸಚಿವಾಲಯ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ಎಂಟನೇ ತರಗತಿ ವಿದ್ಯಾರ್ಥಿಯಾದ ವಿನೀಶ್ ಆಚಾರ್ಯ ವಿಜೇತರಾಗಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೆಚ್ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಮಣಿಪಾಲದ MSDC ಯಲ್ಲಿ ಡಿಸೈನಿಂಗ್ ಕಾರ್ಯಗಾರ: ಭಾಗವಹಿಸಿ ಒಂದೊಳ್ಳೆಯ ಕೌಶಲ್ಯ ಪಡೆಯಿರಿ

ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (PMA Pai Foundationನ ಘಟಕ)MSDC ಮತ್ತು ಡಾವಿನ್ಸಿ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಸಹಯೋಗದಲ್ಲಿ ಕ್ಯಾನ್ವಾ ಕುರಿತು ಒಂದು ದಿನದ ಕಾರ್ಯಾಗಾರ ಮಣಿಪಾಲದ MSDCಯಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಕಾರ್ಯಾಗಾರಕ್ಕೆ ₹ 500/ ಶುಲ್ಕ ನಿಗಧಿಪಡಿಸಲಾಗಿದ್ದು ಉಪಹಾರ/ತಿಂಡಿ ಕೂಡ ಇದರಲ್ಲಿ ಒಳಗೊಂಡಿದೆ. ಕಾರ್ಯಾಗಾರಕ್ಕೆ ನೀವು ನಿಮ್ಮದೇ ಲ್ಯಾಪ್‌ಟಾಪ್‌ನ್ನು ತರಬಹುದು. ಲ್ಯಾಪ್‌ಟಾಪ್ ಇಲ್ಲದಿದ್ದರೂ ಚಿಂತೆ ಬೇಡ ನಿಮಗೆ ಡೆಸ್ಕ್‌ಟಾಪ್ ವ್ಯವಸ್ಥೆ ಕೂಡ […]
ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ – ಡ್ರೋನ್ ಹಾರಾಟ ನಿಷೇಧ; ಅಭಿಮಾನಿಗಳು ಪಟಾಕಿ, ಧ್ವಜ ಬ್ಯಾಗ್, ನೀರಿನ ಬಾಟಲ್ ತರುವಂತಿಲ್ಲ!

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNS) 2023, ಸೆಕ್ಷನ್ 163ರ ಅನ್ವಯ ಆದೇಶಿಸಿದ್ದಾರೆ.ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ (Udupi Sri Krishna Matha) ವಠಾರ, ಪ್ರವಾಸಿ ಮಂದಿರದ ಸುತ್ತಮುತ್ತ ಹಾಗೂ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ […]