ಉಡುಪಿ:ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದಾಗ ಯೋಜನೆ ಫಲಪ್ರದ : ಅಶೋಕ್ ಕುಮಾರ್ ಕೊಡವೂರು

ಉಡುಪಿ: ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಜನಸಾಮಾನ್ಯರಿಗೆತಲುಪಿದಾಗ ಮಾತ್ರ ಆ ಯೋಜನೆಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಸರಕಾರದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದುಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರಆಂದೋಲನ ವಾಹನಕ್ಕೆ ಚಾಲನೆ […]

ಉಡುಪಿ:ಸಂವಿಧಾನದ ಮೂಲ ಆಶಯಗಳನ್ನು ಅರ್ಥೈಸಿಕೊಳ್ಳಿ: ಯಶ್ ಪಾಲ್ ಸುವರ್ಣ

ಉಡುಪಿ: ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ನವೆಂಬರ್ 26 ಮಹತ್ವದ ದಿನವಾಗಿದೆ. ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿತು ಮತ್ತು 1950ರ ಜನವರಿ 26ರಂದು ಅದು ಜಾರಿಗೆ ಬಂದು ನಮ್ಮ ದೇಶ ಗಣರಾಜ್ಯವಾಯಿತು. ಸಂವಿಧಾನವನ್ನು ರಚಿಸುವಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅನನ್ಯವಾಗಿದ್ದು ನಾವೆಲ್ಲರೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥೆಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ […]

ಉಡುಪಿ:ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಿಂದ ಪುತ್ತಿಗೆ ಮಠದ ಸ್ವಾಮೀಜಿ ಭೇಟಿ

ಉಡುಪಿ:ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಅವರು ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಸೌಹಾರ್ದತೆ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕ್ರೈಸ್ತ ಅಭಿವೃದ್ದಿನಿಗಮದ ನಿರ್ದೇಶಕರು ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್, ಗ್ಯಾರಂಟಿ ಯೋಜನೆ ಸದಸ್ಯರಾದ ಡಾ.ಸಂತೋಷ್ ಕುಮಾರ್ ಬೈರಂಪಳಿ ಹಾಗೂ […]

ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ಧತೆ ಪೂರ್ಣ- ಪುತ್ತಿಗೆ ಶ್ರೀ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಇದೇ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು. ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಾಹ್ನ 12 ಗಂಟೆಗೆ ಪ್ರಧಾನಿಯವರು ಕೃಷ್ಣಮಠಕ್ಕೆ ಬರಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸುವರು ಎಂದರು. ಪೂರ್ಣಕುಂಭ ಸ್ವಾಗತದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದು ಶ್ರೀಕೃಷ್ಣ […]

ಉಡುಪಿ:ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3 ಬಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರುವ, ರಾಜ್ಯದಲ್ಲಿ ಖಾಯಂ ವಿಳಾಸ ಹೊಂದಿರುವ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]