ಕಾರ್ಕಳದಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್ ಅದ್ಧೂರಿ ಸಾಂಸ್ಕೃತಿಕ ವೈಭವ

ಕಾರ್ಕಳ: ಆಳ್ವಾಸ್ ನುಡಿಸಿರಿ–ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ಇಂದು (ನವೆಂಬರ್ 29) ಸಂಜೆ 5:45ಕ್ಕೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಅದ್ಧೂರಿ ಸಾಂಸ್ಕೃತಿಕ ವೈಭವ ಜರುಗಲಿದೆ. ಖ್ಯಾತ ಉದ್ಯಮಿ ಬರೋಡಾ ಶಶಿಧರ ಶೆಟ್ಟಿ ಉದ್ಘಾಟಿಸಲಿದ್ದು, ಸಮಾರಂಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನುಡಿಸಿರಿ–ವಿರಾಸತ್ ಘಟಕದ ಗೌರವಾಧ್ಯಕ್ಷ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ,ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಉದ್ಘಾಟಿಸಲಿದ್ದು,ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ಮೋಹನ್ ಆಳ್ವಾ ಮತ್ತು ತಾಲೂಕಿನ ಪ್ರಮುಖ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು.ಈ ವರ್ಷದ ನುಡಿಸಿರಿ–ವಿರಾಸತ್ […]
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ […]
ಉಡುಪಿ: ಯುವತಿ ನಾಪತ್ತೆ

ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿ ಬನ್ನಂಜೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ. ಈಕೆ ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ನ.24ರಂದು ಮನೆಯಿಂದ ಹೊರಗೆ ಹೋದವಳು ವಾಪಾಸು ಬಾರದೇ ನಾಪತ್ತೆಯಾಗಿದ್ದಾಳೆ. 4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾಳೆ. ಈಕೆಯ […]
ಉಡುಪಿ:ಧನ ಸಹಾಯ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂರಚನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಸಲು ಮತ್ತು ಚಿತ್ರಕಲೆ / ಶಿಲ್ಪ ಕಲಾಕೃತಿಗಳ ಪ್ರರ‍್ಶನಕ್ಕೆ ಧನಸಹಾಯ ನೀಡಲು ಪ್ರಸಕ್ತ ಸಾಲಿನ ಸಾಮಾನ್ಯ, ವಿಶೇಷ ಘಟಕ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್‌ಸೈಟ್ Sevasindhu.karnataka.gov.in ನಲ್ಲಿ […]
ಯಕ್ಷಗಾನ ತಾಳಮದ್ದಳೆ ಸಪ್ತಾಹ-2025: ಯಕ್ಷಗಾನವನ್ನು ಪ್ರೀತಿಸುವವರು ತಮ್ಮ ಹಿರಿಯರನ್ನು ಗೌರವಿಸುತ್ತಾರೆ; ಉಪೇಂದ್ರ ಆಚಾರ್ಯ ಪೆರ್ಡೂರು

ಮಂಗಳೂರು: ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ಯಕ್ಷಭಾರತಿ ( ರಿ.) ಪುತ್ತೂರು ಇವರ ಸಹಯೋಗದೊಂದಿಗೆ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ 13ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ನಾಲ್ಕನೇ ದಿನ ಹಿರಿಯ ವಿದ್ವಾಂಸ ಮತ್ತು ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ದಿ| ವಿದ್ವಾನ್ ಕೆ. ಕಾಂತ ರೈ ಮೂಡುಬಿದಿರೆ ಅವರ ಸಂಸ್ಮರಣಾ ಕಾರ್ಯಕ್ರಮ […]