ಮಣಿಪಾಲ: ಬೆಂಕಿಗಾಹುತಿಯಾದ ಶಾಲಾ ಬಸ್: ತಪ್ಪಿದ ಭಾರೀ ದುರಂತ!

ಉಡುಪಿ: ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ಬಸ್ ವೊಂದು ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟೊತ್ತಿಗೆ ಬಸ್ ಸುಟ್ಟು […]

ಉಚ್ಚಿಲ: ಕಾರು ಮತ್ತು ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ಉಡುಪಿ: ಆಟೋ ರಿಕ್ಷಾ ಮತ್ತು ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಉಚ್ಚಿಲ ನಿವಾಸಿ ರಫೀಕ್ ಗಾಯಗೊಂಡ ಚಾಲಕ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಉಡುಪಿಯ ಖಾಸಗಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ […]

ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ದೂರುದಲ್ಲಿ ನಿಂತು ನೋಡುವ ಆಸೆ ನನಗೆ ಇತ್ತು. ಕಾರಣಾಂತರಗಳಿಂದ ಅದು ತಪ್ಪಿ ಹೋಗಿದೆ. ಅದರ ಬಗ್ಗೆ ಕಿಂಚಿತ್ತೂ ಬೇಸರವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು. ಕನಕನ ಕಿಂಡಿಗೆ ಸ್ವರ್ಣ ಕವಚವನ್ನು ಸೇವೆಯ ರೂಪದಲ್ಲಿ ನೀಡಿದ ಪ್ರಮೋದ್‌ ಮಧ್ವರಾಜ್ ಅವರನ್ನು ಕಾರ್ಯಕ್ರಮದಲ್ಲಿ ಕಡೆಗಣಿಸಿದ್ದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದೆ. ಈ […]

ಉಡುಪಿ:ಕಲ್ಯಾಣಪುರ, ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಆವಿರ್ಭವ – 2025.

ಉಡುಪಿ:ಉಡುಪಿ, ಕಲ್ಯಾಣಪುರದಲ್ಲಿರುವ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ, ಸಾಧಕ ವಿದ್ಯಾರ್ಥಿ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮವನ್ನು, ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು, ತದನಂತರ ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸುವುದರ ಜೊತೆಗೆ, ಜೀವನದಲ್ಲಿ ನಮಗೆ ಸಿಗುವ ಉತ್ತಮ ಅವಕಾಶಗಳನ್ನು ಉಪಯೋಗಿಸಿಕೊಳ್ಳುವ ಕಲೆಯನ್ನು ನಾವು ತಿಳಿಯಬೇಕು ಎಂದು, ಕ್ರಿಯೇಟಿವ್ ಶಿಕ್ಷಣ […]

ದಿತ್ವಾ ಚಂಡಮಾರುತ: ಶ್ರೀಲಂಕಾದಲ್ಲಿ ಸಿಲುಕಿದ್ದ 130 ಭಾರತೀಯರ ಸ್ಥಳಾಂತರ

ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಪ್ರಜೆಗಳನ್ನು ಭಾರತೀಯ ವಾಯುಪಡೆ ಸುರಕ್ಷಿತವಾಗಿ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಕರೆತಂದಿದೆ. ಕೊಲಂಬೊದಿಂದ ತಿರುವನಂತಪುರಂಗೆ ಕಾರ್ಯನಿರ್ವಹಿಸುತ್ತಿರುವ ಐಎಎಫ್ ವಿಮಾನಗಳು ಭಾನುವಾರ ಸಂಜೆ 7.30ರ ಹೊತ್ತಿಗೆ ಇಲ್ಲಿ ತಲುಪಿದವು ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ರಕ್ಷಣಾ ಇಲಾಖೆ ವಕ್ತಾರರ ಪ್ರಕಾರ, ದ್ವೀಪ ರಾಷ್ಟ್ರಕ್ಕೆ ರಕ್ಷಣಾ ಸಾಮಗ್ರಿ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ತಲುಪಿಸಲು ಬಳಸಲಾಗುತ್ತಿದ್ದ ಐಎಎಫ್‌ನ ಐಎಲ್-76 ಮತ್ತು ಸಿ-130 ಜೆ ಹೆವಿ ಲಿಫ್ಟ್ ಕ್ಯಾರಿಯರ್‌ಗಳು ಅಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಕರೆತಂದಿವೆ. ಶ್ರೀಲಂಕಾದಲ್ಲಿ […]