ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ.

ಹಿರಿಯಡ್ಕ: ವಿಪರೀತ ಕುಡಿತದ ಚಟ ಹೊಂದಿದ್ದ ಬೈರಂಪಳ್ಳಿ ಗ್ರಾಮ ಹರಿಖಂಡಿಗೆ ನಿವಾಸಿ ಅಮ್ಮಣ್ಣಿ ಎಂಬವರ ಮಗ ಅಜೀತ್(25) ಎಂಬವರು ಶನಿವಾರ ರಾತ್ರಿ ಮನೆಯ ಹಾಲ್ ನಲ್ಲಿ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

80 ಬಡಗಬೆಟ್ಟು ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಉಡುಪಿ: ಉತ್ತಮ ಆಡಳಿತ ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮ ಪಂಚಾಯಿತಿಗೆ ಸೋಮವಾರ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ‌ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ 5 ಲಕ್ಷ ನಗದನ್ನು ಪಂಚಾಯತ್ ಅಧ್ಯಕ್ಷರಾದ ಕೇಶವ […]

ಡಿ. 6- 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ”

ಉಡುಪಿ: ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ ಮತ್ತು ರಾಷ್ಟ್ರ ಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ ‘ಕರಾವಳಿ ಭಜನಾ ಸಮಾವೇಶ’ ಎಂಬ ಎರಡು ದಿನಗಳ ಸಮಾವೇಶವನ್ನು ಡಿ. 6 ಮತ್ತು 7ರಂದು ಉಡುಪಿ ಎಂಜಿಎಂ ಕಾಲೇಜು ಆವರಣದ ಟಿ. ಮೋಹನದಾಸ್ ಪೈ ಅಮೃತ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಸಂಚಾಲಕಿ ಡಾ. ಕಾತ್ಯಾಯಿನಿ […]

ಉಡುಪಿ: ಸೇತುರಾಮ್ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ

ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲ್ಪಡುವ ‘ಶಾರದಾ ಕೃಷ್ಣ’ ಪ್ರಶಸ್ತಿಗೆ ಕಿರುತೆರೆ ನಟ, ರಂಗನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ. ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಪ್ರಶಸ್ತಿಯು 50 ಸಾವಿರ ನಗದು ಹಾಗೂ […]

ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ

ಉಡುಪಿ: ಶಿವಗಿರಿ ಮಠ ವರ್ಕಲ, ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ನಾಳೆ (ಡಿ.3) ಮಂಗಳೂರು ವಿವಿ ಕ್ಯಾಂಪಸ್ ಮಂಗಳಗಂಗೋತ್ರಿಯಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮತ್ತು‌ ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಮುಂದಿನ ಬಜೆಟ್ ನಲ್ಲಿ 500 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ […]