ಡಿ. 3ರಂದು ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ.

ಹೆಬ್ರಿ: ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ ಡಿ. 3ರಂದು ಸಂಜೆ 4ಗಂಟೆಯಿಂದ ಕೀಳಂಜೆ ಶ್ರೀ ನಂದಿಕೇಶ್ವರ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಇದೆ ಸಂದರ್ಭದಲ್ಲಿ ನಂದಿಕೇಶ್ವರ ದೈವಸ್ಥಾನದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಾಗೂ ದಾನಿಗಳಿಗೆ ಸಮ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಾಣಾಕ್ಯ ಮೇಲೋಡಿಸ್ ಹೆಬ್ರಿ ಇವರಿಂದ ಸಂಗೀತಾ ರಸಮಂಜರಿ, ಸುಪ್ರಸಿದ್ಧ ನಾಟಕ ತಂಡವಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಶಶಿರಾಜ್ ರಾವ್ ಕಾವೂರು ಅವರ ಛತ್ರಪತಿ ಶಿವಾಜಿ […]
ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ ಗ್ರಾಮೀಣ ಪ್ರತಿಭೆಗಳ ಅನಾವರಣ: ಶಶಿಕಾಂತ್ ಶೆಟ್ಟಿಗಾರ್

ಹೆಬ್ರಿ: ಗ್ರಾಮೀಣ ಪ್ರತಿಭೆಗೆಗಳು ಬೆಳಕಿಗೆ ಬರಬೇಕಾದರೆ ಅವಕಾಶ ಮತ್ತು ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸಿ ಪ್ರತಿಭೆಗಳ ಅನಾವರಣ ಮಾಡುತ್ತಿರುವುದು ಶ್ಲಾಘನೀಯ ಎಂದು ಉದ್ಯಮಿ ಶಶಿಕಾಂತ್ ಶೆಟ್ಟಿಗಾರ್ ಹೇಳಿದರು. ಅವರು ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುವ ವಾಯ್ಸ್ ಆಪ್ ಚಾಣಕ್ಯ 2025 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 8ರ ಆಯ್ಕೆ ಪ್ರಕ್ರಿಯೆಯನ್ನು ಹೆಬ್ರಿಯ ಚಾಣಕ್ಯ ಶಿಕ್ಷಣ […]
ಉಡುಪಿ: ಮನೆಯೊಂದಕ್ಕೆ ನುಗ್ಗಿ 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಖತರ್ನಾಕ್ ಕಳ್ಳನ ಬಂಧನ.

ಉಡುಪಿ: ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ್ (37) ಬಂಧಿತ ಆರೋಪಿ.ನ.30ರಂದು ಚಿಟ್ಪಾಡಿಯ ಶೈಲಾ ವಿಲ್ಲೆಲ್ ಮೀನಾ ಅವರ ಮನೆಗೆ ನುಗ್ಗಿದ ಯಾರೋ ಕಳ್ಳರು ಮನೆಯೊಳಗೆ ಪ್ರವೇಶಿಸಿ ಸುಮಾರು 65.79 ಲಕ್ಷ ಮೌಲ್ಯದ ಸೊತ್ತು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಉಡುಪಿ […]
ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ.

ಹಿರಿಯಡ್ಕ: ವಿಪರೀತ ಕುಡಿತದ ಚಟ ಹೊಂದಿದ್ದ ಬೈರಂಪಳ್ಳಿ ಗ್ರಾಮ ಹರಿಖಂಡಿಗೆ ನಿವಾಸಿ ಅಮ್ಮಣ್ಣಿ ಎಂಬವರ ಮಗ ಅಜೀತ್(25) ಎಂಬವರು ಶನಿವಾರ ರಾತ್ರಿ ಮನೆಯ ಹಾಲ್ ನಲ್ಲಿ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
80 ಬಡಗಬೆಟ್ಟು ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಉಡುಪಿ: ಉತ್ತಮ ಆಡಳಿತ ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮ ಪಂಚಾಯಿತಿಗೆ ಸೋಮವಾರ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ 5 ಲಕ್ಷ ನಗದನ್ನು ಪಂಚಾಯತ್ ಅಧ್ಯಕ್ಷರಾದ ಕೇಶವ […]