ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ

ಉಡುಪಿ: ಶಿವಗಿರಿ ಮಠ ವರ್ಕಲ, ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ನಾಳೆ (ಡಿ.3) ಮಂಗಳೂರು ವಿವಿ ಕ್ಯಾಂಪಸ್ ಮಂಗಳಗಂಗೋತ್ರಿಯಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಮುಂದಿನ ಬಜೆಟ್ ನಲ್ಲಿ 500 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ […]
ಮೂಡುಬಿದಿರೆ:ಆಳ್ವಾಸ್‌ನ ಧನಲಕ್ಷ್ಮಿ ಅಭಿನಂದನಾ ಸಮಾರಂಭ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಮಂಗಳೂರು, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಜಂಟಿ ಸಹಯೋಗದಲ್ಲಿ ಡಾಕಾದಲ್ಲಿ ನಡೆದ ಎರಡನೇ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಯವರ ಅಭಿನಂದನಾ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]
ಎಲ್ಲಾ ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್ ಇನ್ಸ್ಟಾಲ್ ಮಾಡುವುದು ಕಡ್ಡಾಯ: ಕೇಂದ್ರ ಸರ್ಕಾರ

ನವದೆಹಲಿ: ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ ಖರೀದಿಸುವುದು, ಮೊಬೈಲ್ ಕಳ್ಳತನ ಆಗುವುದು, ಪ್ರತಿ ಮೊಬೈಲ್‌ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ (ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಎಲ್ಲ ಮೊಬೈಲ್‌ಗಳಲ್ಲಿಯೂ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ (ಇನ್‌ಸ್ಟಾಲ್) ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಈ ಸಂಬಂಧ ಭಾರತದ ಎಲ್ಲ ಮೊಬೈಲ್ ತಯಾರಕರಿಗೆ, ಮೊಬೈಲ್ ಸೆಟ್‌ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರಸಂಪರ್ಕ ಸಚಿವಾಲಯವು ನ.28ರಂದು ಕೆಲವು ನಿರ್ದೇಶನಗಳನ್ನು ನೀಡಿ […]
ಮೂಡುಬಿದಿರೆ:ಆಳ್ವಾಸ್‌ನ ಓರ್ವಳಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ವೇಯ್ಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ, ಮೇಘನಾ, ಶಂಕ್ರಪ್ಪ ಹಾಗೂ ಆತ್ಮೀಯಾ ಕ್ರಮವಾಗಿ ಇರ್ವರು ಬಾಲ್‌ಬ್ಯಾಡ್‌ಮಿಂಟನ್, ಮಲ್ಲಕಂಬ ಹಾಗೂ ಕಬಡ್ಡಿ ವಿಭಾಗದಲ್ಲಿ ಆಯ್ಕೆಯಾಗಿ ಸೋಮವಾರ […]
ಕಾರ್ಕಳ ಕ್ರೈಸ್ಟ್ಕಿಂಗ್: ವಿಶ್ವಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯ ತಂಡದ ನಾಯಕಿಯಾಗಿ ಶಗುನ್ ಎಸ್ವರ್ಮ ಹೆಗ್ಡೆ ಆಯ್ಕೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಇವಳು 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತರಾಷ್ಟ್ರೀಯ ಪಂದ್ಯವು ಇದೇ ಡಿಸೆಂಬರ್ ತಿಂಗಳ 3 ರಿಂದ 13 ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದ್ದು ಶಗುನ್ ಎಸ್ ವರ್ಮ […]