ಡಿ. 6- 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ”

ಉಡುಪಿ: ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ ಮತ್ತು ರಾಷ್ಟ್ರ ಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ ‘ಕರಾವಳಿ ಭಜನಾ ಸಮಾವೇಶ’ ಎಂಬ ಎರಡು ದಿನಗಳ ಸಮಾವೇಶವನ್ನು ಡಿ. 6 ಮತ್ತು 7ರಂದು ಉಡುಪಿ ಎಂಜಿಎಂ ಕಾಲೇಜು ಆವರಣದ ಟಿ. ಮೋಹನದಾಸ್ ಪೈ ಅಮೃತ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಸಂಚಾಲಕಿ ಡಾ. ಕಾತ್ಯಾಯಿನಿ […]

ಉಡುಪಿ: ಸೇತುರಾಮ್ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ

ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲ್ಪಡುವ ‘ಶಾರದಾ ಕೃಷ್ಣ’ ಪ್ರಶಸ್ತಿಗೆ ಕಿರುತೆರೆ ನಟ, ರಂಗನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ. ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಪ್ರಶಸ್ತಿಯು 50 ಸಾವಿರ ನಗದು ಹಾಗೂ […]

ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ

ಉಡುಪಿ: ಶಿವಗಿರಿ ಮಠ ವರ್ಕಲ, ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ನಾಳೆ (ಡಿ.3) ಮಂಗಳೂರು ವಿವಿ ಕ್ಯಾಂಪಸ್ ಮಂಗಳಗಂಗೋತ್ರಿಯಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮತ್ತು‌ ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಮುಂದಿನ ಬಜೆಟ್ ನಲ್ಲಿ 500 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ […]

ಮೂಡುಬಿದಿರೆ:ಆಳ್ವಾಸ್‌ನ ಧನಲಕ್ಷ್ಮಿ ಅಭಿನಂದನಾ ಸಮಾರಂಭ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಮಂಗಳೂರು, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಜಂಟಿ ಸಹಯೋಗದಲ್ಲಿ ಡಾಕಾದಲ್ಲಿ ನಡೆದ ಎರಡನೇ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿಯವರ ಅಭಿನಂದನಾ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಎಲ್ಲಾ ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್‌ ಇನ್ಸ್ಟಾಲ್ ಮಾಡುವುದು ಕಡ್ಡಾಯ: ಕೇಂದ್ರ ಸರ್ಕಾರ

ನವದೆಹಲಿ: ಆಧಾರ್‌ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್‌ ಖರೀದಿಸುವುದು, ಮೊಬೈಲ್‌ ಕಳ್ಳತನ ಆಗುವುದು, ‍ಪ್ರತಿ ಮೊಬೈಲ್‌ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್‌ ಗುರುತಿನ ಸಂಖ್ಯೆ (ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಎಲ್ಲ ಮೊಬೈಲ್‌ಗಳಲ್ಲಿಯೂ ‘ಸಂಚಾರ ಸಾಥಿ’ ಆ್ಯಪ್‌ ಅಳವಡಿಕೆ (ಇನ್‌ಸ್ಟಾಲ್) ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಈ ಸಂಬಂಧ ಭಾರತದ ಎಲ್ಲ ಮೊಬೈಲ್‌ ತಯಾರಕರಿಗೆ, ಮೊಬೈಲ್‌ ಸೆಟ್‌ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರಸಂಪರ್ಕ ಸಚಿವಾಲಯವು ನ.28ರಂದು ಕೆಲವು ನಿರ್ದೇಶನಗಳನ್ನು ನೀಡಿ […]