ಡಿ.6-7ರಂದು ಮಾರ್ಪಳ್ಳಿ ಶಾರದಾ ನೃತ್ಯಾಲಯದ ರಜತ ಮಹೋತ್ಸವ

ಉಡುಪಿ: ಶಾರದಾ ನೃತ್ಯಾಲಯ ಮಾರ್ಪಳ್ಳಿ ಇದರ ರಜತ ಮಹೋತ್ಸವ ಕಾರ್ಯಕ್ರಮ ಡಿ. 6 ಮತ್ತು 7ರಂದು ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ನೃತ್ಯ ಮತ್ತು ಸಂಗೀತ ನಿರ್ದೇಶಕಿ ವಿದುಷಿ ಪಾವನ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಿ.6ರಂದು ಸಂಜೆ 4.45ಕ್ಕೆ ಮೈಸೂರು ವಸುಂಧರಾ ಪ್ರದರ್ಶನ ಕಲೆಗಳ ಕೇಂದ್ರದ ನಿರ್ದೇಶಕ ಡಾ. ವಸುಂಧರಾ ದೊರೆಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದುಷಿ ಯಶೋದ ಆಚಾರ್ಯ, ವಿದ್ವಾನ್ ಮಧೂರು ಪಿ. […]
ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮಹಿಳಾ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇನ್ಕ್ಯುಬೇಶನ್ ಜಾಗೃತಿ ಕಾರ್ಯಕ್ರಮ

ಉಡುಪಿ,ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾವಿದ್ಯಾಲಯವು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕತಾಂತ್ರಿಕ ಉನ್ನತೀಕರಣ ಮಂಡಳಿ, ಕರ್ನಾಟಕ ತಾಂತ್ರಿಕ ಸಲಹಾಸೇವೆಗಳ ಸಂಸ್ಥೆ ಮತ್ತು ಭಾರತ ಸರಕಾರದ ಯೋಜನೆಯಡಿಯಲ್ಲಿ ಒಂದು ದಿನದ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 02 ಡಿಸೆಂಬರ್ 2025 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಡಾ. ಸಚಿನ್ ಭಟ್, ಡೀನ್ (ಸಂಶೋಧನೆ)ಮತ್ತು ಡಾ. ಸುದರ್ಶನ್ ರಾವ್, ಡೀನ್ (ಶೈಕ್ಷಣಿಕ) ಇವರುಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕೈಗಾರಿಕಾಕೇಂದ್ರದ ಉಪನಿರ್ದೇಶಕರಾದ ಶ್ರೀ ಸೀತಾರಾಮ್ ಶೆಟ್ಟಿ ಇವರುವಹಿಸಿದ್ದರು. […]
ರಾಜ್ಯದ 3187 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ: ಸಚಿವ ನಿತಿನ್ ಗಡ್ಕರಿ

ಕಳೆದ ಐದು ಹಣಕಾಸು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಎಕ್ಸ್‌ಪ್ರೆಸ್‌ವೇಗಳು ಮತ್ತು ಆರ್ಥಿಕ ಕಾರಿಡಾರ್‌ಗಳು ಸೇರಿದಂತೆ 3,187 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. ದಾವಣಗೆರೆ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್ ಅವರು ಸರ್ಕಾರವನ್ನು ಗ್ರಾಮೀಣ ಪ್ರದೇಶಗಳಲ್ಲಿ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿದರು […]
ಉಡುಪಿ:ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ),:ನೂತನ ಸ್ವಂತ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:2015ರಲ್ಲಿ ಪ್ರಾರಂಭವಾದ ಸಂಸ್ಥೆ ಗ್ರಾಹಕ ಬಂಧುಗಳ ಪ್ರೀತಿ, ಪ್ರೋತ್ಸಾಹ ಹಾಗೂ ವಿಶ್ವಾಸನೀಯ ವ್ಯವಹಾರದೊಂದಿಗೆ ದಶ ವರ್ಷವನ್ನು ಪೂರೈಸುತ್ತಾ ಸಹಕಾರಿ ಸಮೃದ್ದಿಯ ಪ್ರತೀಕವಾಗಿ ನಿರ್ಮಿತಗೊಂಡ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಉದ್ಘಾಟನಾ ಸಮಾರಂಭವು ದಿ.14-12-2025ನೇ ರವಿವಾರ ಪೂರ್ವಾಹ್ನ 10.00 ಗಂಟೆಗೆ ಶ್ರೀ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದಂಗಳವರು, ಶ್ರೀ ಅದಮಾರುಮಠ ಇವರ ಅಮೃತ ಹಸ್ತದಿಂದ ಉದ್ಘಾಟನೆಗೊಳ್ಳುವುದು. ಕಾರ್ಯಕ್ರಮದಲ್ಲಿ ಮದರ್ ಆಫ್ ಸಾರೋಸ್ ಚರ್ಚ್ನ ಸಹಾಯಕ ಧರ್ಮಗುರುಗಳಾದ ವಂದನೀಯ ರೆ. ಫಾ. ಲಿಯೋ ಪ್ರಕಾಶ್ ಡಿಸೋಜ, ಉಡುಪಿ ವಿಧಾನಸಭಾ ಶಾಸಕರಾದ […]