ಬ್ರಹ್ಮಾವರ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಧಿ ಪೂಜಾರಿ ರಾಷ್ಟ್ರ ಮಟ್ಟದ ಖೋ ಖೋ ಸ್ಪರ್ಧೆಗೆ ಆಯ್ಕೆ.

ಬ್ರಹ್ಮಾವರ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಯ ವತಿಯಿಂದ ನೆಡೆದ ರಾಜ್ಯಮಟ್ಟದ ಖೋ ಖೋ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆ ಯನ್ನು ಪ್ರತಿನಿಧಿಸಿ, ತಂಡ ಅತ್ಯುತ್ತಮ ನಿರ್ವಹಣೆ ಪ್ರದರ್ಶಿಸಿ ಸೆಮಿಫೈನಲ್ ಪ್ರವೇಶದಲ್ಲಿ ರೋಚಕ ಸೋಲು ಅನುಭವಿಸಿದರು, ಸರ್ವಾಂಗೀಣ ಆಟದ ಪ್ರದರ್ಶನ ನೀಡಿದ SMS ಪದವಿಪೂರ್ವ ಕಾಲೇಜು ಬ್ರಹ್ಮಾವರ ವಿದ್ಯಾರ್ಥಿನಿ ನಿಧಿ ಪೂಜಾರಿ ಬೆಸ್ಟ್ ಡಿಫೆಂಡರ್ ಪ್ರಶಸ್ತಿ ಯೊಂದಿಗೆ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ. ಇವಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ ವರ್ಗ, ಶಿಕ್ಷಕರಕ್ಷಕ ಸಮಿತಿ, […]
ಉಡುಪಿ: ಶಾಲೆಯ ರೋಡ್ ಸರಿ ಇಲ್ಲ , ರಿಪೇರಿ ಮಾಡಿಸಿ – ಪುಟಾಣಿ ವಿದ್ಯಾರ್ಥಿಯಿಂದ ಆಯುಕ್ತರಿಗೆ ದೂರು

ಉಡುಪಿ: ಉಡುಪಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿವೆ. ಈ ಮಧ್ಯೆ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದ್ದು ರಸ್ತೆ ರಿಪೇರಿಗೂ ತೊಡಕಾಗಿದೆ. ಇದೇವೇಳೆ ಪುಟಾಣಿ ವಿದ್ಯಾರ್ಥಿಯೊಬ್ಬ ನಗರಸಭೆ ಆಯುಕ್ತರಿಗೆ ದೂರು ಹೇಳಿದ್ದಾನೆ. ನಮ್ಮ ಶಾಲೆಯ ರಸ್ತೆ ಸರಿ ಇಲ್ಲ ,ಸರಿಪಡಿಸಿ ಎಂದು ನಗರಸಭೆ ಆಯುಕ್ತರಿಗೆ ಮುಕುಂದ ಕೃಪ ಶಾಲೆಯ ಪುಟಾಣಿ ವಿದ್ಯಾರ್ಥಿ ತನ್ಮಯ್ ಕಾಮತ್ ಮನವಿ ಮಾಡಿದ್ದಾನೆ.ಬಾಲಕನ ಮಾತನ್ನು ಆಲಿಸಿದ ಆಯುಕ್ತರು ಸರಿಪಡಿಸುವ ಭರವಸೆ ನೀಡಿದ್ದಾರೆ.
ಉಡುಪಿ:ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್- ಎಸ್.ಎಸ್.ಪಿತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2026 ರ ಜನವರಿ 31 […]
ಉಡುಪಿ: ಬಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್https://sevasindhu.karnataka.govt.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ:8277799990 ಅಥವಾ ಉಡುಪಿದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕುಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ […]
ಉಡುಪಿ:ಶ್ರೀಕೋಟಿ ಲಿಂಗೇಶ್ವರ ದೇವಸ್ಥಾನ ರಥೋತ್ಸವ : ಮದ್ಯ ಮಾರಾಟ ನಿಷೇಧ

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಶ್ರೀಕೋಟಿ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 04 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ […]