ಕೋಟೇಶ್ವರದಲ್ಲಿ ಸಂಭ್ರಮದ ಕೊಡಿ ಹಬ್ಬ

ಉಡುಪಿ: ಕರಾವಳಿ ಕರ್ನಾಟಕದ ಅತಿದೊಡ್ಡ ಉತ್ಸವ ‘ಕೊಡಿ ಹಬ್ಬ’ ಎಂದೇ ಖ್ಯಾತಿ ಪಡೆದಿರುವ ಕೋಟೇಶ್ವರ ಕೋಟಿಲಿಂಗೇಶ್ವರ ದೇವರ ಮನ್ಮಹಾರಥೋತ್ಸವವು ಸಡಗರ ಸಂಭ್ರಮದಿಂದ ಜರುಗಿತು. ಕೋಟಿಲಿಂಗೇಶ್ವರನಿಗೆ ಧಾರ್ಮಿಕ ವಿಧಿ ವಿಧಾನಗಳು ಜರುಗಿದ ನಂತರ ಸಾವಿರಾರು ಭಕ್ತರ ಉತ್ಸಾಹದ ಘೋಷಗಳೊಂದಿಗೆ ರಥೋತ್ಸವವು ಜರುಗಿತು. ಗರುಡ ದರ್ಶನ ಆಗುತ್ತಿದ್ದಂತೆ ಭಕ್ತರ ಘೋಷವಾಕ್ಯಗಳು ಮುಗಿಲುಮುಟ್ಟಿದ್ದವು. ಈ ಮಹಾ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಪುನೀತರಾದರು. ಕೊಡಿ ಹಬ್ಬದ ಇನ್ನೊಂದು ವಿಶೇಷ ನವ ವಧು ವರರು ಹಬ್ಬಕ್ಕೆ ಬಂದು ಕಬ್ಬನ್ನು ತೆಗೆದು ಕೊಂಡು ದೇವರ […]
ಇನ್ನು ಮುಂದೆ ದ್ವೇಷ ಭಾಷಣ ಮಾಡಿದರೆ 7 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.

ಬೆಂಗಳೂರು: ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಈ ಉದ್ದೇಶಕ್ಕಾಗಿ ಕಾಯ್ದೆಯನ್ನು ಜಾರಿಗೊಳಿಸಲಿದೆ. ದ್ವೇಷ ಭಾಷಣ, ಪ್ರಚೋದನಕಾರಿ ಮಾತುಗಳು ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುತ್ತಿರುವುದನ್ನು ಗಮನಿಸಿರುವ ಸರ್ಕಾರ, ಇಂತಹ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ. ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸರ್ಕಾರ ರೂಪಿಸಿರುವ, ‘ಕರ್ನಾಟಕ ದ್ವೇಷ […]
ಮಣಿಪಾಲ- ಮಂಗಳೂರಿನ ಪ್ರಸಿದ್ಧ ಪ್ರೊಡಕ್ಷನ್ ಇಂಡಸ್ಟ್ರಿಯಲ್ಲಿ ಬೇಕಾಗಿದ್ದಾರೆ.

ಉಡುಪಿ:ಮಣಿಪಾಲ- ಮಂಗಳೂರಿನ ಪ್ರಸಿದ್ಧ ಪ್ರೊಡಕ್ಷನ್ ಇಂಡಸ್ಟ್ರಿಯಲ್ಲಿ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ಆಕರ್ಷಕ ವೇತನದೊಂದಿಗೆ PF-ESI ಸೌಲಭ್ಯವಿದೆ. ITI, ಡಿಗ್ರಿ, ಡಿಪ್ಲೊಮಾ ಆಗಿರುವ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ. 9606968198, 7019891796
ಬಂಟಕಲ್ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾಗಿ ನಾಗರಾಜ್ ಭಟ್.

ಶಿರ್ವ: ಬಂಟಕಲ್ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾಗಿ ನಾಗರಾಜ್ ಭಟ್ ಅಧಿಕಾರ ವಹಿಸಿಕೊಂಡರು. ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾಕೃಷ್ಣ ಎಸ್ ಐತಾಳ್ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಸುದರ್ಶನ್ ರಾವ್ ಅವರನ್ನು ಸಂಸ್ಥೆಯ ಶೈಕ್ಷಣಿಕ ಡೀನ್ ಆಗಿ ನೇಮಿಸಲಾಯಿತು. ನಾಗರಾಜ್ ಭಟ್ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ, ಶೈಕ್ಷಣಿಕ ಡೀನ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ: ರಿಷಬ್‌ಗೆ ಪಂಜುರ್ಲಿ ದೈವ ಅಭಯ.

ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ ನಾಯಕ ನಟನಾಗಿ ನಟಿಸಿದ ‘ಕಾಂತಾರ: ಚಾಪ್ಟರ್ 1 ಚಿತ್ರ ಯಶಸ್ಸು ಕಂಡಿದೆ.ಇದರಲ್ಲಿ ಕರಾವಳಿ ಭಾಗದ ಜನರ ದೈವದ ನಂಬಿಕೆ, ಆಚರಣೆಯನ್ನು ಜಗತ್ತಿಗೆ ತೋರಿಸಿದ್ದಾರೆ. ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು. ಈ ವೇಳೆ ಅವರಿಗೆ ದೈವದ ಅಭಯ ಸಿಕ್ಕಿದೆ. ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ […]