ಶೀಘ್ರದಲ್ಲಿ ತಂಬಾಕು ಉತ್ಪನ್ನಗಳ ಬೆಲೆ ಗಣನೀಯ ಏರಿಕೆ!

ತಂಬಾಕು ಮತ್ತು ಅದರ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಅಧಿಕ ಅಬಕಾರಿ ಸುಂಕವನ್ನು ವಿಧಿಸಲು ಅವಕಾಶ ಕಲ್ಪಿಸುವ ಮಹತ್ವದ ಕೇಂದ್ರೀಯ ಅಬಕಾರಿ ತಿದ್ದುಪಡಿ ಮಸೂದೆಗೆ ಸಂಸತ್ತು ಅಂಗೀಕಾರ ನೀಡಿದೆ. ಬುಧವಾರ ಲೋಕಸಭೆಯಲ್ಲಿ ಅನುಮೋದನೆ ಪಡೆದಿದ್ದ ಈ ಮಸೂದೆಯು, ಗುರುವಾರ ರಾಜ್ಯಸಭೆಯಲ್ಲೂ ಒಪ್ಪಿಗೆ ಪಡೆಯುವ ಮೂಲಕ ಸಂಸತ್ತಿನ ಎರಡೂ ಸದನಗಳ ಸಮ್ಮತಿ ಪಡೆದಿದೆ. ಇದರೊಂದಿಗೆ, ಶೀಘ್ರದಲ್ಲೇ ತಂಬಾಕು ಉತ್ಪನ್ನಗಳ ಬೆಲೆ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಕಾಂಪೆನ್ನೇಶನ್ ಸೆಸ್ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ, ಈ […]

ಉಡುಪಿ:ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಅಗತ್ಯ ಕ್ರಮವಹಿಸಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯವು ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸುವ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು (ಖಾಸಗಿ ಮತ್ತು ಸರ್ಕಾರಿ), ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಅವರ ಹಾಗೂ ಇನ್ನಿತರ ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ವಾಸವಿರುವ ಬೀದಿನಾಯಿಗಳ ಸಂಖ್ಯೆಯ ಮಾಹಿತಿಯನ್ನು ನಗರಸಭಾ ಕಚೇರಿಗೆ ತುರ್ತಾಗಿ ನೀಡಬೇಕು ಮತ್ತು ಈ ಎಲ್ಲಾ ಸದರಿ ಸಂಸ್ಥೆಗಳಲ್ಲಿ ಬೀದಿನಾಯಿಗಳ ನಿಯಂತ್ರಣ ಮಾಡಲು […]

ಉಡುಪಿ: ಹಾಸ್ಟೆಲ್‌ನಿಂದ ಓಡಿಹೋದ 13 ವರ್ಷದ ಬಾಲಕ ಕಾರವಾರದಲ್ಲಿ ಪತ್ತೆ.

ಉಡುಪಿ: ಉಡುಪಿಯ ಬೋರ್ಡಿಂಗ್ ಹಾಸ್ಟೆಲ್ ಒಂದರಿಂದ ಏಕಾಂಗಿಯಾಗಿ ಓಡಿಹೋಗುತಿದ್ದ 13 ವರ್ಷ ಪ್ರಾಯದ ಶಾಲಾ ಬಾಲಕನೊಬ್ಬನನ್ನು ಕೊಂಕಣ ರೈಲ್ವೆಯ ಹೆಡ್ ಟಿಟಿಇ ಕಾರವಾರದಲ್ಲಿ ಪತ್ತೆ ಹಚ್ಚಿ ಮರಳಿ ಉಡುಪಿಗೆ ಕಳುಹಿಸಿದ್ದಾರೆ. ಬುಧವಾರ ರೈಲು ನಂ.12133 ಮಂಗಳೂರು ಎಕ್ಸೆಸ್ ಕಾರವಾರ ತಲುಪಿದಾಗ, ರೈಲಿನ ಬೋಗಿ ಎಸ್‌3ಯಲ್ಲಿ ಬಾಲಕನೊಬ್ಬ ಏಕಾಂಗಿಯಾಗಿ ಕುಳಿತಿರುವುದನ್ನು ಅಲ್ಲಿನ ಹೆಡ್ ಟಿಟಿಇ ರಾಘವೇಂದ್ರ ಶೆಟ್ಟಿ ಗಮನಿಸಿ, ಆತನಲ್ಲಿ ಮಾತನಾಡಿ ವಿವರಗಳನ್ನು ಕೇಳಿದರು. ಆತ ಯಾವುದೇ ಪ್ರಶ್ನೆಗೆ ಸರಿಯಾಗಿ ಉತ್ತರಿಸದಿದ್ದಾಗ, ಆತನ ಬ್ಯಾಗ್ ಅನ್ನು ಪರಿಶೀಲಿಸಿದರು. ಅದರಲ್ಲಿ […]

ಉಡುಪಿ:ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷಿನ್ ಯೋಜನೆಯಡಿ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ ಕೈಗೊಂಡ ರೈತರಿಗೆ ಶೇ. 50 ರ ಸಹಾಯಧನ, ಕೃಷಿ ಯಾಂತ್ರೀಕರಣ ಉಪ ಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ, ನೀರಿನ ಸಮರ್ಪಕ ಬಳಕೆಗಾಗಿ […]