ಮಂಗಳೂರು: ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು!

ಮಂಗಳೂರು: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ತಂದೆ, ತಾಯಿ, […]
ಪೆರ್ಡೂರು ಅನಂತ ಸೌರಭದಲ್ಲಿ ವಾಯ್ಸ್ ಆಫ್ ಚಾಣಕ್ಯ -2025: ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಸೆಮಿ ಫೈನಲ್.

ಪೆರ್ಡೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಉದಯಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2025 ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಡಿ.7ರಂದು ಮಧ್ಯಾಹ್ನ 1.30ರಿಂದ ರಿಂದ ಪೆರ್ಡೂರು ಎಪಿಟಿ ಶಾಲೆ ಎದುರಿರುವ ಅನಂತ ಸೌರಭ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭವನ್ನು ಪೆರ್ಡೂರು ಬಂಟರ ಸಂಘ ಹಾಗೂ ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಅಧ್ಯಕ್ಷ ಕೆ. ಶಾಂತರಾಮ ಸೂಡ […]
ಉಡುಪಿ:ಜ. 24-26 ರ ವರೆಗೆ ಬೈಂದೂರು ಉತ್ಸವ ಕಾರ್ಯಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಬೈಂದೂರು ಉತ್ಸವ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಪ್ರದರ್ಶಿಸುವುದರೊಂದಿಗೆ, ಗ್ರಾಮೀಣ ಭಾಗದ ಜನರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಲಾಭದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೈಂದೂರು ಉತ್ಸವ – ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೈಂದೂರು ಉತ್ಸವ ಕಾರ್ಯಕ್ರಮವು ಜನವರಿ 24 ರಿಂದ 26 ರ ವರೆಗೆ ಬೈಂದೂರಿನಲ್ಲಿ ನಡೆಯಲಿದೆ. ಉತ್ಸವದಲ್ಲಿ […]
ಉಡುಪಿ:ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದಿಂದ ಉದ್ಯೋಗಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ : ಜಿ.ಪಂ. ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಪ್ರತೀಕ್ ಬಾಯಲ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರ, ಪಂಪುಚಾಲಕ, ಜವಾನ,ಸ್ವಚ್ಛತಾಗಾರ ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ […]
ಉಡುಪಿ:ಇಂದು (ಡಿ.6) ವಿಶ್ವ ಏಡ್ಸ್ ದಿನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ವಿದ್ಯಾರತ್ನ ಸ್ಕೂಲ್ &ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್‌ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಉಡುಪಿಲಕ್ಷ್ಯ ಮತ್ತು ಶ್ರೀ ಕ್ಷೇತ್ರ […]