ಲೊಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್:3,000ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ

ಉಡುಪಿ, ಡಿ.8: ದೈಹಿಕ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರನ್ನರ್ಸ್ ಕ್ಲಬ್ ವತಿಯಿಂದ ಎರಡನೇ ಆವೃತ್ತಿಯ ಲೊಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್ 2025ನ್ನು ಉಡುಪಿಯಲ್ಲಿ ರವಿವಾರ ಹಮ್ಮಿಕೊಳ್ಳಲಾಗಿತ್ತು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮ್ಯಾರಥಾನ್ ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಅದಾನಿ ಗ್ರೂಪ್ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ, ಮಿಷನ್ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಚಾಲನೆ ನೀಡಿದರು.ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡ ಓಟ ನಗರದ ಪ್ರಮುಖ […]
ಮೂಡುಪೆರಂಪಳ್ಳಿ ನವಚೈತನ್ಯ ಯುವಕ ಮಂಡಲದ 40 ನೇ ವಾರ್ಷಿಕೋತ್ಸವ : ಡಾ. ತಲ್ಲೂರು ಅವರಿಗೆ ವಜ್ರ ಚೈತನ್ಯ ಪ್ರಶಸ್ತಿ ಪ್ರದಾನ

ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.ಅವರು ಶುಕ್ರವಾರ ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್ಲಿ ನಡೆದ ನವ ಚೈತನ್ಯ ಯುವಕ ಮಂಡಲದ 40ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಎಲ್ಲಿ ಸಜ್ಜನರಿಗೆ ಗೌರವ ಆದರಗಳು ನಡೆಯುತ್ತಿವೆ ಎಂದಾದರೆ ಆ ಸಂಘಗಳು ಉತ್ತಮ ಕಾರ್ಯಗಳನ್ನು ನಡೆಸುತ್ತಿವೆ ಎಂದರ್ಥ. ಮೂಡುಪೆರಂಪಳ್ಳಿ ನವಚೈತನ್ಯ ಯುವಕ ಮಂಡಲದ 40 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವುದು […]
ಗಣಿಗಾರಿಕೆ ವಿಷಯದಲ್ಲಿ ಕೊರಗರ ಮೇಲೆ ದೌರ್ಜನ್ಯ ಆರೋಪ; ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ

ಉಡುಪಿ: ಕೊರಗ ಕುಟುಂಬಗಳು ಹಲವು ದಶಕದಿಂದ ನಡೆಸಿಕೊಂಡು ಬಂದ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸುತ್ತಿದ್ದು, ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಗರಿಕೆಮಠ, ಅಚ್ಲಾಡಿಯ ಕೊರಗ ಕುಟುಂಬಗಳು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಸಹಕಾರದಲ್ಲಿ ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು. ಈ ಸಂದರ್ಭ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸುಜಾತ ಮಾತನಾಡಿ, ಉಡುಪಿ ಜಿಲ್ಲೆಯ ಯಡ್ತಾಡಿ ಗ್ರಾಮದ ಸರ್ವೆ ನಂಬರ್ 145 ರಲ್ಲಿ 1.84 ಎಕ್ರೆ ಜಾಗದಲ್ಲಿ ಪರಿಶಿಷ್ಠ […]
ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್’ಗೆ ಹೆಚ್ಚಳ: ರಾಜ್ಯ ಸರ್ಕಾರ

ಎಂಎಸ್‌ಪಿ ದರದಲ್ಲಿ ಮೆಕ್ಕೆಜೋಳ ಖರೀದಿಗೆ ಒತ್ತಾಯಿಸಿ ಹಾವೇರಿ ಸೇರಿ ರಾಜ್ಯದ ವಿವಿಧೆಡೆ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಪ್ರತಿ ರೈತನಿಂದ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಸುವುದಾಗಿ ಭಾನುವಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದ ನಂತರ ಹೊರಡಿಸಲಾದ ತಿದ್ದುಪಡಿಯಲ್ಲಿ ಪ್ರತಿ ರೈತನಿಗೆ 20 ಕ್ವಿಂಟಾಲ್‌ಗಳ ಹಿಂದಿನ ಮಿತಿಯನ್ನು 50 ಕ್ವಿಂಟಾಲ್‌ಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ. FRUITS ಸಾಫ್ಟ್‌ವೇರ್‌ನಲ್ಲಿ ದಾಖಲಾಗಿರುವ ರೈತರ ಭೂಮಿಯ ವಿಸ್ತೀರ್ಣದ ಆಧಾರದ ಮೇಲೆ, ಪ್ರತಿ ರೈತನಿಂದ 50 ಕ್ವಿಂಟಾಲ್‌ಗಳವರೆಗೆ ಮೆಕ್ಕೆಜೋಳವನ್ನು ಖರೀದಿಸಬಹುದು. ಪ್ರತಿ […]
ಉಡುಪಿ:ಗೃಹರಕ್ಷಕರ ಸಾಧನೆ ಇತರರಿಗೆ ಮಾದರಿಯಾಗಲಿ: ಎ.ಎಸ್.ಪಿ ಸುಧಾಕರ್ ಎಸ್. ನಾಯ್ಕ್

ಉಡುಪಿ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿಯೂ ಗೃಹರಕ್ಷಕರು ಪೊಲೀಸರಷ್ಟೇ ಸಮರ್ಥರಾಗಿಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಜೊತೆಗೆ ವೈಯಕ್ತಿಕವಾಗಿಯೂ ಸಾಧನೆಮಾಡುತ್ತಿದ್ದಾರೆ. ಇವರ ಸಾಧನೆ ಇತರರಿಗೂ ಮಾದರಿಯಾಗಲಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್.ನಾಯ್ಕ್ ಹೇಳಿದರು. ಅವರು ಶನಿವಾರ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿದರು. ಗೃಹರಕ್ಷಕರು ಪೊಲೀಸ್, […]