ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ

ಹೆಬ್ರಿ: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ಹೆಬ್ರಿಯ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಪೆರ್ಡೂರು ಬಂಟರ ಸಂಘ ಹಾಗೂ ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಅಧ್ಯಕ್ಷ ಕೆ. ಶಾಂತರಾಮ ಸೂಡ ಹೇಳಿದರು. ಅವರು ಪೆರ್ಡೂರು ಅನಂತ ಸೌರಭ ಸಭಾಂಗಣದಲ್ಲಿ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕುಂಬಾರರ ಗುಡಿ […]
ಮಹಿಳೆಯರಿಗೆ ಋತುಚಕ್ರ ರಜೆ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ!

ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರದ ಆದೇಶದ ವಿರುದ್ಧ ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ಸಂಘಟನೆಗಳು ಕಾನೂನು ಹೋರಾಟಕ್ಕೆ ಇಳಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶದ ಕುರಿತು ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸಮಯ ನೀಡಿದ್ದು, ಚಳಿಗಾಲದ ನ್ಯಾಯಮಂಡಳಿಯ ರಜೆ ನಂತರ ಉತ್ತರ ನೀಡುವಂತೆ ಸೂಚಿಸಿದೆ. ಅಂತಿಮ ತೀರ್ಪು ಹೊರಬರುವವರೆಗೆ ಸರ್ಕಾರದ […]
ಐಟಿ ವಲಯಕ್ಕೆ ಗುಡ್ ನ್ಯೂಸ್; ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ. ಮೀಸಲು!

ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ, ಐಟಿ ಕಾರಿಡಾರ್ ಅಭಿವೃದ್ಧಿಗೆ ನಮ್ಮ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ. ಬೆಂಗಳೂರಿನ ಸಮಗ್ರ ಅಭಿವೃದ್ದಿಯೇ ನಮ್ಮ ಆದ್ಯತೆ ಎಂದು ತಿಳಿಸಿದ್ದಾರೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್ ಪುರಂ ವರೆಗೆ ಐಟಿ ಕಾರಿಡಾರ್ ಹೊರವರ್ತುಲ ರಸ್ತೆ ಅಭಿವೃದ್ಧಿ, 20.50 ಕಿ.ಮೀ ಉದ್ದದ […]
ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ.

ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ ಯಶಸ್ವಿಯಾಗಿ 26ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸಂಸ್ಥೆ ಯಕ್ಷಗಾನಕ್ಕೆ ನೀಡಿದ ಕೊಡುಗೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಇಲ್ಲಿನ ಯಶಸ್ವಿ ಕಲಾವೃಂದದ ವಾರ್ಷಿಕ ಸಮಾರಂಭ ರಂಗಾರ್ಪಣ-25 ದಲ್ಲಿ ರಾಜ್ಯ ರಾಜ್ಯೋತ್ಸವ ಹಾಗೂ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು. ಯಶಸ್ವಿ […]
ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ದಶಮಿ, ಸಮೀಕ್ಷಾಗೆ ಚಾಂಪಿಯನ್ ಶಿಪ್

ಕುಂದಾಪುರ: ಗುರು ಅಬಾಕಸ್ ಮತ್ತು ವೇದಿಕ್ ಮ್ಯಾತ್ ಸೆಂಟರ್ ಪುಣೆ,ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಮದರ್ ತೆರೇಸಾ ಶಾಲೆ ಶಂಕರನಾರಾಯಣ, ಇಲ್ಲಿನ ನಲ್ಮೆಯ ವಿದ್ಯಾರ್ಥಿನಿಯರಾದ 4ನೇ ತರಗತಿಯ ದಶಮಿ ಡಿ ಹಾಗೂ 3ನೇ ತರಗತಿಯ ಸಮೀಕ್ಷಾ ದಿನೇಶ್ ಶೆಟ್ಟಿ ಇವರು ಚಾಂಪಿಯನ್ ಶಿಪ್ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಪುಟಾಣಿ ವಿದ್ಯಾರ್ಥಿನಿಯರ ಯಶಸ್ಸಿಗೆ ಶಾಲಾ ಆಡಳಿತ ಮಂಡಳಿ , ಬೋಧಕ ಬೋಧಕೇತರ ವೃಂದದವರು ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಗೆಲುವಿನ ಭವಿಷ್ಯ […]