ಉಡುಪಿ:ವಲಯ ಸಂಯೋಜಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಖಾಲಿಯಿರುವ ವಲಯ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಸ್ಥಳೀಯ ಭಾಷೆಯಲ್ಲಿ (ಸಂವಹನ ಹಾಗೂ ಬರವಣಿಗೆ) ಯಲ್ಲಿ ಪ್ರಾವಿಣ್ಯತೆ ಹೊಂದಿರುವ, ಟೆಕ್ನಾಲಜಿ ಹಾಗೂ ಸಾಫ್ಟ್ವೇರ್ ಅಪ್ಲಿಕೇಷನ್‌ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರುವ ಸ್ಥಳೀಯ […]

ಉಡುಪಿ:ಸಾಲಿಗ್ರಾಮ ಪ.ಪಂ: ಬೀದಿ ನಾಯಿಗಳ ಉಪಟಳ ತಡೆಯಲು ಸೂಕ್ತ ಕ್ರಮ ವಹಿಸಿ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರುಗಳು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ತಿಳಿಸಬೇಕು. ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ […]

ಉಡುಪಿ:ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಯಾದ ಸಾಂಪ್ರದಾಯಿಕ ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕಾ ಯಾಂತ್ರೀಕೃತ ದೋಣಿ ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಛೇರಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ […]

ಉಡುಪಿ:ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ನಿಧನ

ಉಡುಪಿ:ಹೆಸರಾಂತ ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಅಸೌಖ್ಯ ಅವರನ್ನು ಕಾಡುತ್ತಿತ್ತೆನ್ನಲಾದಗಿದೆ. ಮೃತರ ಅಂತ್ಯ ಸಂಸ್ಕಾರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ.