ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ 3.06 ಕೋ.ರೂ. ದಾಖಲೆಯ ಕಾಣಿಕೆ ಸಂಗ್ರಹ!

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿಂದು 21 ದಿನದಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನ 21 ದಿನದ ಹುಂಡಿ ಎಣಿಕೆಯಲ್ಲಿ 3,6,81,661 ರೂ. ಕಾಣಿಕೆ ಹರಿದುಬಂದಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಎರಡು ತಿಂಗಳಲ್ಲಿ ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದ್ದು, ಕಾಣಿಕೆಯಲ್ಲಿ 2,97,44,661 ರೂ. ಕರೆನ್ಸಿ ನೋಟುಗಳು ಹಾಗೂ 9,37,000 ರೂ. ನಾಣ್ಯಗಳು ಸಂಗ್ರಹವಾಗಿವೆ. 23 ಗ್ರಾಂ ಚಿನ್ನ, 490 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಮಂತ್ರಾಲಯ ರಾಯರ ಮಠದಲ್ಲಿ […]
ಬೀದರ್: ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು.

ಬೀದರ್ : ಶಾಲಾ ವಾಹನ ಹರಿದು 8 ವರ್ಷದ ಬಾಲಕಿಯೊರ್ವಳು ಮೃತಪಟ್ಟ ಘಟನೆ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ಮಂಗಳವಾರ ಸಾಯಂಕಾಲ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಔರಾದ್ ತಾಲೂಕಿನ ಗಡಿಕುಶನೂರ್ ಗ್ರಾಮದ ರುತ್ವಿ (8) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯು ಬೀದರ್ ತಾಲೂಕಿನ ಜನಾವಾಡಾ ಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಮಂಗಳವಾರ ಸಾಯಂಕಾಲ ಶಾಲಾ ವಾಹನದಲ್ಲಿ ಮನೆಗೆ ಬಂದ ಬಾಲಕಿ ಶಾಲಾ ವಾಹನದಿಂದ ಇಳಿದು ಪಕ್ಕದಲ್ಲಿ ನಿಂತಿದ್ದಳು. ಆಕೆ ನಿಂತಿದ್ದನ್ನು ಗಮನಿಸದ ಚಾಲಕ ಆಕೆಯ ಮೇಲೆಯೇ […]
ಡಿ.12ರಂದು ‘ಪಿಲಿಪಂಜ’ ತುಳುಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

ಉಡುಪಿ: ಯಸ್ ಬಿ ಗ್ರೂಪ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ ‘ಪಿಲಿಪಂಜ’ ತುಳು ಸಿನಿಮಾ ಡಿಸೆಂಬರ್ 12ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಭರತ್ ಶೆಟ್ಟಿ ತಿಳಿಸಿದರು. ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ ಸಿನಿಮಾನ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ […]
ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಸ್ಥಳದಲ್ಲೇ ಮೃತ್ಯು.

ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತಪಟ್ಟ ಯುವಕ. ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಇಂದು ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ […]
ಮಲ್ಪೆ: ಅಕ್ರಮವಾಗಿ ನೆಲೆಸಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಶಿಕ್ಷೆ!

ಉಡುಪಿ: ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯ ಡಿ.8ರಂದು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾ ದೇಶದ ಪ್ರಜೆಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ ಯಾನೆ ಫಾರೂಕ್, ಇಸ್ಮಾಯಿಲ್ ಎಸ್.ಕೆ., ಮುಹಮ್ಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ ಯಾನೆ ಅಬ್ದುಲ್ ಕರೀಮ್, ಸಲಾಂ ಎಸ್.ಕೆ ಯಾನೆ ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ., ಮುಹಮ್ಮದ್ ಸೋಜಿಬ್ ಯಾನೆ […]