ಎರ್ಮಾಳು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿದ್ದ ಕಾರು: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ಮೃತ್ಯು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ. ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. […]
ಮಂಗಳೂರು:ತ್ರಿಶಾ ಕ್ಲಾಸಸ್ : ಸಿ ಎಸ್ ಎಕ್ಸಿಕ್ಯೂಟಿವ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ಮಂಗಳೂರು: ಸಿ.ಎ, ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಎಕ್ಸಿಕ್ಯೂಟಿವ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಡಿಸೆಂಬರ್ 6, 2025 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಪ್ರೊ. ರಾಜ್ ಗಣೇಶ್ ಕಾಮತ್ ಇವರು ಸಿ ಎಸ್ ಎಕ್ಸಿಕ್ಯೂಟಿವ್ ಕೋರ್ಸಿನ ಬಗ್ಗೆ ಹಾಗೂ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆಯಾದ ಪ್ರೊ. ಯಶಸ್ವಿನಿ […]
ಇಂಡಿಗೋ ವಿಮಾನಗಳ ಹಾರಾಟ ಶೇ.10 ರಷ್ಟು ಕಡಿತ: ಕೇಂದ್ರ ಸರ್ಕಾರ

ದೇಶದ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಶೇ. 60ರಷ್ಟು ಪಾಲು ಹೊಂದಿರುವ ಇಂಡಿಗೋ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟು ದೇಶಾದ್ಯಂತ ಲಕ್ಷಾಂತರ ಪ್ರಯಾಣಿಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 6 ದಿನಗಳ ಬಿಕ್ಕಟ್ಟಿನ ನಂತರ ಇದೀಗ ಪರಿಸ್ಥಿತಿ ತುಸು ಸುಧಾರಿಸಿದ್ದು, ಸಂಪೂರ್ಣ ಸಹಜ ಸ್ಥಿತಿಗೆ ಬರಲು ಇನ್ನಷ್ಟು ದಿನ ಅಗತ್ಯ ಎಂದು ಸಂಸ್ಥೆ ಹೇಳಿದೆ. ಈ ಮಧ್ಯೆ ಕೇಂದ್ರ ಇಂಡಿಗೋ ಸಂಸ್ಥೆಗೆ ಅಂಕುಶ ಹಾಕಲು ನಿರ್ಧರಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೊದ ಕಾರ್ಯಾಚರಣೆಯಲ್ಲಿ ಶೇ. 10ರಷ್ಟನ್ನು ಕಡಿತಗೊಳಿಸಿದೆ. ವಿಮಾನಯಾನ ಸಚಿವ ರಾಮ್ ಮೋಹನ್ […]
ಉಡುಪಿ:ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನೆ

ಉಡುಪಿ ಡಿಸೆಂಬರ್ 09 (ಕ.ವಾ): ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನಾ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 3.30 ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸರಂಗಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಭೀಮನಕಟ್ಟೆ ಭೀಮಸೇತು ಮುನಿವೃಂದ ಮಠದ ಶ್ರೀ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ದಿವ್ಯ ಉಪಸ್ಥಿತಿವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, […]
ಉಡುಪಿ:ಗೃಹ ರಕ್ಷಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ದೂ.ಸಂಖ್ಯೆ: 0820-2533650 ಹಾಗೂ ತಾಲೂಕು ಘಟಕಾಧಿಕಾರಿಗಳ ಕಛೇರಿಯನ್ನುಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.