ಉಡುಪಿ ಶ್ರೀಕೃಷ್ಣಮಠದಲ್ಲಿ ಶ್ಲೋಕ ಪಠಿಸಿ ಗಮನ ಸೆಳೆದ ನಟ-ನಿರೂಪಕ ಮಾಸ್ಟರ್ ಆನಂದ್

ಉಡುಪಿ: ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಂಜೆ ನಡೆಯುವ ಅಷ್ಟಾವಧಾನ ಸೇವೆ ಅತ್ಯಂತ ಅಪೂರ್ವವಾಗಿದೆ . ಈ ಸೇವೆಯ ವೇಳೆಯಲ್ಲಿ ವಿವಿಧ ರೀತಿಯ ಧಾರ್ಮಿಕ ಪಠಣಗಳು ನಡೆಯುತ್ತದೆ. ಅಷ್ಟಾವಧಾನ ಕಾರ್ಯಕ್ರಮದ ವೇಳೆ ಸ್ವಾಮೀಜಿಗಳ ಸಮ್ಮುಖದಲ್ಲಿ, ನಟ ನಿರೂಪಕ ಮಾಸ್ಟರ್ ಆನಂದ್ ಯಜುರ್ವೇದ ಪಠಣದ ಮೂಲಕ ಗಮನ ಸೆಳೆದಿದ್ದಾರೆ. ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ನಡೆದ ಈ ಅಪೂರ್ವ ಕಾರ್ಯಕ್ರಮದ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಬಹಳ ಸ್ಪಷ್ಟವಾಗಿ ಮತ್ತು ಕ್ರಮಬದ್ಧವಾಗಿ ಆನಂದ್ ಶ್ಲೋಕಗಳನ್ನು ಪಠಿಸುತ್ತಿರುವುದು ಗಮನ ಸೆಳೆದಿದೆ.

ಮದುವೆ ಮಾತುಕತೆಗೆ ಮನೆಗೆ ಕರೆದು ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದು ಹುಡುಗನ ಕೊಲೆ!

ಅಮರಾವತಿ: ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪ್ರೇಮಿಗಳಿಬ್ಬರ ನಡುವಿನ ಪ್ರೀತಿ ಹುಡುಗನ ಸಾವಿಗೆ ಕಾರಣವಾಗಿದೆ. ಹುಡುಗ ಮತ್ತು ಹುಡುಗಿ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಅರಿತ ಹುಡುಗಿಯ ಪೋಷಕರು ಮದುವೆಯ ಕುರಿತು ಮಾತನಾಡಲು ಮನೆಗೆ ಕರೆದು ಹುಡುಗನಿಗೆ ಬ್ಯಾಟ್‌ನಿಂದ ಹೊಡೆದು ಕೊಂದಿರುವುದಾಗಿ ವರದಿಯಾಗಿದೆ. ಇವರಿಬ್ಬರ ನಡುವಿನ ಪ್ರೀತಿಗೆ ಹುಡುಗಿಯರ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಹಿಂದೆ ಈತನಿಗೆ ಹಲವಾರು ಬಾರಿ ಎಚ್ಚರಿಕೆ ನೀಡಲಾಗಿತ್ತು. ಇದರ ಹೊರತಾಗಿಯೂ, ಈ ಇಬ್ಬರು ಪ್ರೀತಿಸುತ್ತಿದ್ದರು. ಈ ಹಿನ್ನೆಲೆ ಕೊಲೆಗೈದಿದ್ದಾರೆ ಎನ್ನುವ ಆರೋಪಗಳು ಕೇಳಿ […]

ಹೆಜಮಾಡಿ: ಟಯರ್ ಸ್ಪೋಟಗೊಂಡು ಮಗುಚಿದ ಟೆಂಪೋ – ಕಾರ್ಮಿಕ ಮಹಿಳೆ ಸಾವು

ಉಡುಪಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ. 66ರಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ 7 ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರಿದ್ದರು. ವೇಗವಾಗಿ ಸಾಗುತ್ತಿದ್ದ […]

ಡಿ.13ರಂದು ಉಡುಪಿಯಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ”

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” ವನ್ನು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ. 13ರ ಶನಿವಾರ ಸಂಜೆ 5:45ಕ್ಕೆ ಆಯೋಜಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರು […]

ಡಿ.14ರಂದು ಶೀರೂರು ಮಠದ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ

ಉಡುಪಿ: ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.15ಕ್ಕೆ ಶೀರೂರು ಮಠದಲ್ಲಿ ದೇವತಾ ಪ್ರಾರ್ಥನೆ ನಡೆಯಲಿದೆ. ಬಳಿಕ ಶ್ರೀ ಅನಂತೇಶ್ವರ, ಶ್ರೀಚಂದ್ರಮೌಳೀಶ್ವರ, ಶ್ರೀಕೃಷ್ಣಮುಖ್ಯಪ್ರಾಣ, ಗರುಡ […]