ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ: ತಂದೆ ತಾಯಿಯ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನವಿರಲಿ – ಡಾ.ಸುಧಾಕರ ಶೆಟ್ಟಿ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ.09 ರಂದು ನಡೆಯಿತು. ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನಲ್ ಟ್ರಸ್ಟ್ ಹಾಗೂ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ವಿಶೇಷವಾದ ಶಿಕ್ಷಣದ  ಕಾಲಘಟ್ಟದಲ್ಲಿ ವಿದ್ಯಾರ್ಜನೆಗೈಯುತ್ತಿರುವ ವಿದ್ಯಾರ್ಥಿಗಳು ವಯೋಸಹಜ ವಾದ ಆಸೆ ಆಕಾಂಕ್ಷೆಗಳಿಗೆ  ಕಡಿವಾಣ ಹಾಕಿ ತಂದೆ ತಾಯಿಯ ಶ್ರಮ ವನ್ನು ನೆನಪಿಸಿಕೊಂಡು ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನ ವಿರಲಿ ಎಂದರು. ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಅಧ್ಯಕ್ಷ […]

ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. […]