ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ, ಪ್ರಮಾಣ ಪತ್ರ ವಿತರಣೆ

ಹೆಬ್ರಿ: ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಇಂತಹ ವೇದಿಕೆಗಳು ಸಿಕ್ಕಾಗ ಅವಕಾಶವನ್ನು ಬಳಸಿಕೊಳ್ಳಬೇಕು.ಅಂತಹ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುತ್ತಿರುವ ಚಾಣಕ್ಯ ಸಂಸ್ಥೆಯ ಸಮಾಜ ಮುಖಿ ಚಿಂತನೆ ಶ್ಲಾಘನೀಯ ಎಂದು ಹೇಳಿದರು. ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ರಾಜಕುಮಾರ್ […]

ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಆಳ್ವಾಸ್ ಸಂಸ್ಥೆಯ ತಜ್ಙ ವೈದ್ಯರಾದ ಡಾ. ಹನಾ ಶೆಟ್ಟಿಯವರು ಉದ್ಘಾಟಿಸಿ ಸಂವಾದ ಕಾರ್ಯಕ್ರಮವನ್ನು ನಡೆಸಿ ಸಭಿಕರ ಪ್ರಶ್ನೋತ್ತರಗಳಿಗೆ ಉತ್ತರಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ […]

ಕಾರ್ಕಳ ಜ್ಞಾನಸುಧಾ : ಜಿ. ಎಲ್.ತ್ರಿಪುರಾಂತಕರವರಿಂದ ‘ಮೌಲ್ಯಸುಧಾ’

ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ತಾರೀಕು 18, ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ ಪ್ರಸಿದ್ಧ ಮೈಸೂರಿನ ಜೆ. ಎಸ್. ಎಸ್ ಸಂಸ್ಥೆಗಳು ಸುತ್ತೂರು ಇಲ್ಲಿನ ಸಂಯೋಜನಾಧಿಕಾರಿ, ಲೇಖಕರು ಹಾಗೂ ವಾಗ್ಮಿಗಳುಆಗಿರುವ ಶ್ರೀ ಜಿ. ಎಲ್. ತ್ರಿಪುರಾಂತಕರವರು ಆಗಮಿಸಲಿದ್ದು ‘ಆಕಾಂಕ್ಷೆಗಳು ಮತ್ತು […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವರೆಡ್‌ಕ್ರಾಸ್ ಘಟಕವು ನಿರಾಮಯ ನರ್ಸಿಂಗ್ ಕಾಲೇಜು ಮತ್ತು ಅಲೈಡ್ಹೆಲ್ತ್ ಸೈನ್ಸ್ನ ಸಹಯೊಗದೊಂದಿಗೆ ದಿನಾಂಕ ೧೨ ಡಿಸೆಂಬರ್ ೨೦೨೫ರಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನುಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಉಡುಪಿ, ಇದರ ಸಂಯೋಜಕರಾದ ಮಹಾಬಲೇಶ್ವರ ಬಿ ಎಂ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಇವರು ತಮ್ಮ ಭಾಷಣದಲ್ಲಿ ಏಡ್ಸ್ ತಡೆಗಟ್ಟುವಿಕೆ, ಚಿಕಿತ್ಸೆ, ನಿರ್ವಹಣೆ ಮತ್ತು ರೋಗದ […]

ಕುಂದಾಪುರ:ಜಾನಪದ ಗೀತೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ.

ಕುಂದಾಪುರ : ಡಿಸೆಂಬರ್ 09 ರಂದು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ಜಾನಪದ ಗೀತೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ […]