ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

ಉಡುಪಿ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಮಾಜ ಸೇವಕ ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿಗೆ ನೀಡಿ ಗೌರವಿಸಲಾಗುವುದು. ಕನ್ನಡ ನಾಡು–ನುಡಿ, ಸಂಸ್ಕೃತಿ, ಸಾಹಿತ್ಯ, ಮಾಧ್ಯಮ, ಶಿಕ್ಷಣ, ಧಾರ್ಮಿಕ, ಕಲೆ ಹಾಗೂ ಸಮಾಜ ಸೇವೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಹೆಜ್ಜೆ ಗುರುತು […]

ಉಡುಪಿ ನಗರಸಭೆ ಕಚೇರಿಯ ಶೌಚಾಲಯದ ಕೊಳಚೆ ನೀರಿನಿಂದ ರೋಗ ಹರಡುವ ಭೀತಿ.!

ಉಡುಪಿ: ನಗರಸಭೆ ಕಚೇರಿಯ ಶೌಚಾಲಯದ ತ್ಯಾಜ್ಯ ನೀರಿನ ಕೊಳವೆಯ ಜೋಡಣೆ ಕಳಚಿಕೊಂಡಿದ್ದು, ಇದರಿಂದಾಗಿ ಶೌಚತ್ಯಾಜ್ಯಗಳು ಹೊರಬೀಳುತ್ತಿದ್ದು, ಪರಿಸರದಲ್ಲಿ ರೋಗ ಹರಡುವ‌ ಭೀತಿ ಎದುರಾಗಿದೆ. ಮಾರಕ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆ ಇದೆ. ಸನಿಹದಲ್ಲಿ ಕವಿ ಮುದಣ್ಣ ಮಾರ್ಗದಿಂದ ನಿತ್ಯಾನಂದ ಮಂದಿರಕ್ಕೆ ಸಂಪರ್ಕಿಸುವ ರಸ್ತೆ ಹಾದು ಹೋಗುತ್ತಿದ್ದು,‌ ಈ ರಸ್ತೆಯಲ್ಲಿ ಭಕ್ತಾದಿಗಳು,‌ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿರುತ್ತಾರೆ. ಪಕ್ಕದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಇದೆ. ಹೊರಹೊಮ್ಮಿತ್ತಿರುವ ಗಬ್ಬು‌ವಾಸನೆಗೆ ಮೂಗು ಮುಚ್ಚಿ‌ ತಿರುಗಾಡ ಬೇಕಾದ ಸಮಸ್ಯೆಯು ಇಲ್ಲಿ ಎದುರಾಗಿದೆ. […]

ಗಿಳಿ ರಕ್ಷಿಸಲು ಹೋದ ಯುವಕ ವಿದ್ಯುತ್ ಶಾಕ್’‌ಗೆ ಬಲಿ

ಬೆಂಗಳೂರಿನ ಗಿರಿನಗರದ ಅಪಾರ್ಟ್‌ಮೆಂಟ್‌ ಬಳಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್‌ ಮಾರ್ಗದ ಕಂಬದ ಮೇಲೆ ಕುಳಿತಿದ್ದ ಸುಮಾರು ₹2 ಲಕ್ಷ ಬೆಲೆ ಬಾಳುವ ವಿದೇಶಿ ತಳಿಯ ಗಿಳಿಯನ್ನು ರಕ್ಷಣೆ ಮಾಡಲು ಹೋದ ಯುವಕ, ವಿದ್ಯುತ್‌ ಆಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ನಾಗಮಂಗಲದ ಅರುಣ್ ಕುಮಾರ್ (32) ಮೃತಪಟ್ಟವರು. ಗಿರಿನಗರದ ವೀರಭದ್ರನಗರದ ಸಂಬಂಧಿಕರ ಅಂಗಡಿಯೊಂದರಲ್ಲಿ ಅರುಣ್‌ ಕುಮಾರ್‌ ಕಳೆದ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಸಂಬಂಧಿ ಲಿಖಿತಾ ಅವರು ಅಪಾರ್ಟ್​ಮೆಂಟ್​ನಲ್ಲಿ ನೆಲಸಿದ್ದರು. ವಿದೇಶಿ ಗಿಳಿಯೊಂದನ್ನು ಲಿಖಿತಾ ಸಾಕಿದ್ದರು. ಅಪಾರ್ಟ್‌ಮೆಂಟ್‌ ಪಕ್ಕದಲ್ಲಿಯೇ […]

ಬೆಂಗಳೂರು-ಮಂಗಳೂರು-ಉಡುಪಿ-ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು.!

ಉಡುಪಿ: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ […]

ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.)ಉಡುಪಿ:ನಾಳೆ (ಡಿ.14) ನೂತನ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಇದರ ಉದ್ಘಾಟನಾ ಸಮಾರಂಭ

ಉಡುಪಿ:ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.)ಉಡುಪಿಯಲ್ಲಿ ನಾಳೆ (ಡಿ.14) ನೂತನ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಇದರ ಉದ್ಘಾಟನಾ ಸಮಾರಂಭವು ಸಮಯ ಬೆಳಿಗ್ಗೆ 10 ಗಂಟೆಯಿಂದ ಟೀಚರ್ ಟ್ರೈನಿಂಗ್ ಸ್ಕೂಲ್ ಬಳಿ ಅಜ್ಜರಕಾಡು ಉಡುಪಿ ಇಲ್ಲಿ ನಡೆಯಲಿರುವುದು. ಸುವರ್ಣ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕನ್ನಡ, ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಮತ್ತು ಬಳಗದವರಿಂದ “ರಾಗ್ ರಂಗ್” ಸಂಗೀತ ರಸ ಮಂಜರಿ ಕಾರ್ಯಕ್ರಮವು ನಾಳೆ ಬೆಳಿಗ್ಗೆ 9:30 ಕ್ಕೆ ನಡೆಯಲಿದೆ. ನೂತನ ಕಟ್ಟಡದ […]