ಕಲಾವಿದ, ಕಲೋಪಾಸಕ ಮುರಲಿ ಕಡೆಕಾರ್‌ಗೆ ಅಕಾಡೆಮಿಯ ಗೌರವ ಪ್ರಶಸ್ತಿ

ಉಡುಪಿ: ಮುರಲಿ ಕಡೆಕಾರ್‌ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಬಂದಿದೆ. ಇದು ಯಾವಾಗಲೋ ಬರಬೇಕಿತ್ತು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುರಲಿಯವರು ಮಾತ್ರ ಪ್ರಶಸ್ತಿ-ಸಂಮಾನಗಳ ಬಗ್ಗೆ ಯಾವತ್ತೂ ತಲೆಕೆಡಿಸಿಕೊಳ್ಳದೆ ಕಾಯಕ ತಪಸ್ಸನ್ನು ಮುಂದುವರಿಸುತ್ತ ಬಂದವರು. ಯಕ್ಷಗಾನ ಕಲಾರಂಗದಲ್ಲಿ ಅವರ ಕಾರ್ಯವೈಶಾಲ್ಯವನ್ನು ಗಮನಿಸಿದರೆ ಇದು ಒಬ್ಬ ಮನುಷ್ಯನಿಗೆ ಸಾಧ್ಯವೆ ಎಂದು ಅಚ್ಚರಿಪಡುವಂತಿದೆ. ಕೆಲವರು ಮುರಲಿಯವರೊಳಗೆ ಮೂವರು ಮನುಷ್ಯರಿರಬೇಕು ಎಂದು ಅಭಿಮಾನದಿಂದಲೇ ಹೇಳುವುದಿದೆ. ಈ ಸಲದ ಯಕ್ಷಗಾನ ಅಕಾಡೆಮಿಯ ಪ್ರಶಸ್ತಿ ಅರ್ಹವಾಗಿಯೇ ಮುರಲಿಯವರಿಗೆ ಸಂದಿದೆ ಎಂದು […]

ಉಡುಪಿ ನಗರಸಭೆ : ವಿವಿಧ ತೆರಿಗೆ ಪಾವತಿಗೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಮಾಲಿಕರು ಮತ್ತು ಅಧಿಭೋಗದಾರರು, ತಮ್ಮ ಮಾಲೀಕತ್ವದ‌ ಕಟ್ಟಡ, ಅಪಾರ್ಟ್ಮೆಂಟ್, ವಾಣಿಜ್ಯ ಸಮುಚ್ಛಯ, ಖಾಲಿ ನಿವೇಶನ ಮತ್ತು ಕೈಗಾರಿಕಾ ಕಟ್ಟಡ, ಸಾರ್ವಜನಿಕ ಕಟ್ಟಡದ ಆಸ್ತಿ ತೆರಿಗೆ, ಘನತ್ಯಾಜ್ಯ ಶುಲ್ಕ, ನೀರಿನ ಕರ, ಉದ್ದಿಮೆ ಪರವಾನಿಗೆ ಮತ್ತು ಜಾಹೀರಾತು ಫಲಕದ ಹಿಂದಿನ ಬಾಕಿ ಮತ್ತು ಪ್ರಸಕ್ತ ಸಾಲಿನ ತೆರಿಗೆಯನ್ನು ಡಿಸೆಂಬರ್ 31ರೊಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಸಬಂಧಪಟ್ಟವರ ಕಟ್ಟಡದ ನೀರಿನ ಸಂಪರ್ಕ ಮತ್ತು ಒಳಚರಂಡಿ ಜೋಡಣೆಯನ್ನು ಸ್ಥಗಿತಗೊಳಿಸಿ, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ […]

ಡಿಸೆಂಬರ್ 19 – 20 ರಂದು ಮೂಡಿಗೆರೆಯಲ್ಲಿ ಕೃಷಿ ಮತ್ತು ತೋಟಗಾರಿಕಾ ಮೇಳ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ಮಹಾವಿದ್ಯಾಲಯ ಮೂಡಿಗೆರೆ, ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಕಡೆಮಡ್ಕಲ್, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕೆ ಮೇಳವು ಮೂಡಿಗೆರೆಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಡಿಸೆಂಬರ್ 19 ಮತ್ತು 20 ರಂದು ನಡೆಯಲಿದೆ. ಅಧಿಕ ಇಳುವರಿ ಭತ್ತದ ತಳಿ ಪ್ರಾತ್ಯಕ್ಷಿಕೆ, ಕಾಳುಮೆಣಸು ಮತ್ತು ಏಲಕ್ಕಿ ಬೆಳೆ ಕೃಷಿ, ತೋಟಗಾರಿಕೆ ತಂತ್ರಜ್ಞಾನಗಳು, […]

ಉಡುಪಿ:ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಪ.ಜಾತಿ/ ಪಂಗಡದ ರೈತರಿಂದ ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ರೈತರುಗಳಿಂದ ಅರ್ಜಿಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಕಾಳುಮೆಣಸು, ಗೇರು, ಅಂಗಾಂಶ ಬೆಳೆ, ಹೈಬ್ರಿಡ್ ತರಕಾರಿ ಹೊಸ ತೋಟಗಳ ಸ್ಥಾಪನೆಗೆ ಶೇ. 50 ರ ಸಹಾಯಧನ, ಪ್ಲಾಸ್ಟಿಕ್ ಹೊದಿಕೆ ಅಳವಡಿಸಲು ಶೇ. 50 ರ ಸಹಾಯಧನ, ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಗರಿಷ್ಠ 0.75 ಲಕ್ಷ […]

ಉಡುಪಿ:ಬಜೆಟ್ ತಯಾರಿ: ಸಾರ್ವಜನಿಕ ಸಮಾಲೋಚನಾ ಸಭೆ – ಸಲಹೆ ಸೂಚನೆ ಆಹ್ವಾನ

ಉಡುಪಿ: ಕರ್ನಾಟಕ ಪುರಸಭಾ ಲೆಕ್ಕಪತ್ರ ಮತ್ತು ಬಜೆಟ್ ನಿಯಮ 2006 ರನ್ವಯ ಉಡುಪಿ ನಗರಸಭೆಯ 2026-27 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಹಾಗೂ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಮೊದಲನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಡಿಸೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ನಗರಸಭೆಯ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ […]