ಕಾರ್ಕಳ ಜ್ಞಾನಸುಧಾದ ಪ್ರಜ್ಞಾ ಮೋಹನ್‌ಗೆ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ತುಮಕೂರು : ತುಮಕೂರಿನ ಎಂಪ್ರೆಸ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ನಡೆದ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ-2025ರಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪ್ರಜ್ಞಾಮೋಹನ್ ತೃತೀಯ ಸ್ಥಾನಪಡೆದಿರುತ್ತಾರೆ. ಈಕೆ ಹಾಸನದ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀಮತಿ ಶೀಲಾ ದಂಪತಿಗಳ ಸುಪುತ್ರಿಯಾಗಿದ್ದಾರೆ.ಇವರಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ […]

ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಮಗು ಮೃತ್ಯು

ಉಡುಪಿ: ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ. ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು. ಕಿನ್ನಿಮೂಲ್ಕಿ ನಿವಾಸಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದರು. ಈ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಅಷ್ಟೊತ್ತಿಗೆ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಘಟನಾ […]

ರಾಜ್ಯಮಟ್ಟದ ಜಂಪ್‌ರೋಪ್ : ಕಾರ್ಕಳ ಜ್ಞಾನಸುಧಾ ತಂಡಕ್ಕೆ ಕಂಚಿನ ಪದಕ

ಕೊಪ್ಪಳ: ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್‌ರೋಪ್ ಸ್ಪರ್ಧೆಯ೩೦ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್ ಗೌಡ ವಿ, ಪ್ರಥಮೇಶ್ ಡಿ.ಪಿ, ಎನ್.ನಿಖಿಲ್, ಶಾನ್ವಿ ಎಸ್ ಹಾಗೂ ಕಾಜೊಲ್.ಎಂ.ಪಿ ತೃತೀಯ ಸ್ಥಾನ ಪಡೆದು ಕಂಚಿನ ಪದಕತನ್ನದಾಗಿಸಿಕೊಂಡಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ಉಡುಪಿ ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಘದಿಂದ “ಮೈ ಡೆಂಟಿಸ್ಟ್” ನಿಯತಕಾಲಿಕೆ ಬಿಡುಗಡೆ

ಉಡುಪಿ: ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಜಿಲ್ಲಾ ಶಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ “ಮೈ ಡೆಂಟಿಸ್ಟ್” ಎಂಬ ಬಾಯಿಯ ಆರೋಗ್ಯದ ನಿಯತಕಾಲಿಕೆ ಮತ್ತು ದಂತ ಚಿಕಿತ್ಸಾಲಯಗಳ ದೂರವಾಣಿ ಡೈರೆಕ್ಟರಿಯನ್ನು ಹೊರತಂದಿದ್ದು, ಇದನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುವುದು ಎಂದು ಭಾರತೀಯ ದಂತ ವೈದ್ಯಕೀಯ ಸಂಘದ ಉಡುಪಿ ಜಿಲ್ಲಾ ಶಾಖೆಯ ಅಧ್ಯಕ್ಷೆ ಡಾ. ಯು.ಬಿ. ಶಬರಿ ತಿಳಿಸಿದರು. ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ನಿಯತಕಾಲಿಕೆಯು ವಿವಿಧ ವೈದ್ಯರು ಬರೆದ 15 ಬಾಯಿಯ ಆರೋಗ್ಯದ ಬಗೆಗಿನ ಲೇಖನಗಳನ್ನು […]

ಕಾರ್ಕಳ:ವಾಲಿಬಾಲ್ ಪಂದ್ಯಾಟದ ಭಾರತ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆಗೆ ಹುಟ್ಟೂರು ಮತ್ತು ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಅದ್ದೂರಿ ಸ್ವಾಗತ

ಕಾರ್ಕಳ: ಚೀನಾದ ಶಾಂಗ್ಲೋದಲ್ಲಿ ಇದೇ ಡಿಸೆಂಬರ್ ತಿಂಗಳ ೩ ರಿಂದ13 ನೇ ತಾರೀಖಿನವರೆಗೆ ನಡೆದ ಅಂತಾರಾಷ್ಟ್ರೀಯ ಸ್ಕೂಲ್ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯ ತಂಡದ ನಾಯಕಿ, ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ಹೆಗ್ಡೆ ಅವರುಪಂದ್ಯಾವಳಿ ಮುಗಿಸಿ ಕಾರ್ಕಳಕ್ಕೆ ಆಗಮಿಸಿದ ಸಂದರ್ಭದಲ್ಲಿಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳು ಹಾಗೂ ಕಾರ್ಕಳದ ನಾಗರೀಕರು ಮತ್ತು ಕ್ರೀಡಾಭಿಮಾನಿಗಳ […]