ರಾಜೇಂದ್ರ ಭಟ್ ಕೆ ಅವರಿಗೆ ಜಯಂಟ್ಸ್ ಫೆಡರೇಶನ್ ರಾಜ್ಯ ಪ್ರಶಸ್ತಿ.

ಕಾರ್ಕಳ: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ ವಿ ಶಾಸ್ತ್ರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜೇಂದ್ರ ಭಟ್ ಕೆ ಅವರಿಗೆ ಈ ವರ್ಷದ ರಾಜ್ಯಮಟ್ಟದ ಜಯಂಟ್ಸ್ ಫೆಡರೇಶನ್ ಅವಾರ್ಡ್ ದೊರೆತಿದೆ. ಅವರ ಶಿಕ್ಷಣರಂಗದ ಸೇವೆಯನ್ನು ಗುರುತಿಸಿ ಜಯಂಟ್ಸ್ ಫೆಡರೇಶನ್ ಈ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ಉಡುಪಿಯಲ್ಲಿ ನಡೆದ ಜಯಂಟ್ಸ್ ಸಂಸ್ಥೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿದೆ. ಅವರು ಕಳೆದ 37 ವರ್ಷಗಳಿಂದ ಇನ್ನಾ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ […]
ಕಾರ್ಕಳ:ಪ್ರಬಂಧ ಸ್ಪರ್ಧೆಯಲ್ಲಿ ಜ್ಞಾನಸುಧಾದ ಇಬ್ಬನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತುಮಕೂರು:ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿಯಲ್ಲಿ ಕಾರ್ಕಳ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ದೆಯಲ್ಲಿ ಕಾರ್ಕಳಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನವಿಭಾಗದ ಇಬ್ಬನಿ ದ್ವಿತೀಯ ಸ್ಥಾನಿಯಾಗಿ ಉಡುಪಿ ಜಿಲ್ಲಾಮಟ್ಟಕ್ಕೆಆಯ್ಕೆ ಗೊಂಡಿರುತ್ತಾರೆ.
ತೀರ್ಥಹಳ್ಳಿ: ಬಿಕಾಂ ವಿದ್ಯಾರ್ಥಿನಿ ಹೃದಯಘಾತದಿಂದ ಮೃತ್ಯು.

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.
ಕುಂದಾಪುರ:ಜಾನಪದ ಗೀತಾ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ.

ಕುಂದಾಪುರ : ಡಿಸೆಂಬರ್ 15 ರಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ತುಮಕೂರು ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ ಗೀತೆ ಗಾಯನ ಸ್ಪರ್ಧೆಯ ದ್ವಿತೀಯ ಪಿಯುಸಿ ವಿಭಾಗದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ದ್ವಿತೀಯ ಸ್ಥಾನ ಪಡೆದು ಅಮೋಘ ಸಾಧನೆಗೆ ಸಾಕ್ಷಿಯಾಗಿದ್ದಾರೆ.ರಾಜ್ಯ ಮಟ್ಟದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ […]
ಉಡುಪಿ:ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 2 ದೇವಸ್ಥಾನಗಳಿಗೆ ಮತ್ತು ಈಗಾಗಲೇ ರಚನೆಗೊಂಡಿರುವ 2 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಒಂದು ಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಸಿ ದೇವಸ್ಥಾನಗಳ ವಿವರ: ಕುಂದಾಪುರ […]