1 ಲಕ್ಷ ಸಾಲ, ಚಕ್ರಬಡ್ಡಿ ಸೇರಿ ಆಯ್ತು 75 ಲಕ್ಷ: ಕಿಡ್ನಿ ಮಾರಿದ ರೈತ!

ಮಹಾರಾಷ್ಟ್ರ: ತೆಗೆದುಕೊಂಡಿದ್ದ ಒಂದು ಲಕ್ಷ ರೂಪಾಯಿ ಸಾಲಕ್ಕೆ ಪ್ರತಿದಿನ 10,000 ಬಡ್ಡಿ ಸೇರಿದಂತೆ 74 ಲಕ್ಷ ರೂ. ಆಗಿದ್ದರಿಂದ ಮಹಾರಾಷ್ಟ್ರದ ರೈತರೊಬ್ಬರು, ಕಾಂಬೋಡಿಯಾಗೆ ತೆರಳಿ ತನ್ನ ಕಿಡ್ನಿ ಮಾರಾಟ ಮಾಡಿರುವ ಘಟನೆ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಚಂದ್ರಾಪುರ ಜಿಲ್ಲೆಯ ರೈತ ರೋಶನ್ ಸದಾಶಿವ್ ಕುಡೆ, ಕೃಷಿಯಲ್ಲಿ ನಿರಂತರವಾಗಿ ನಷ್ಟ ಅನುಭವಿಸಿದ್ದು, ಡೈರಿ ವ್ಯವಹಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಅನೇಕ ಸಾಲಗಾರರಿಂದ 1 ಲಕ್ಷ ರೂ. ಸಾಲ ತೆಗೆದುಕೊಂಡಿದ್ದಾರೆ. ಡೈರಿ ವ್ಯವಹಾರ ಆರಂಭಕ್ಕೂ ಮುನ್ನಾ ಅವರು ಸಾಲ ತೆಗೆದುಕೊಂಡಿದ್ದರು. […]
ಉಡುಪಿ:ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲುಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, […]
ಉಡುಪಿ:ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಮ್ಮ ನಡೆ ವಾರ್ಡಿನ ಕಡೆಗೆ ಕಾರ್ಯಕ್ರಮ : ರಮೇಶ್ ಕಾಂಚನ್

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ “ನಮ್ಮ ನಡೆ ವಾರ್ಡ್ ಕಡೆಗೆ” ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಮಂಗಳವಾರ ಇಂದ್ರಾಳಿಯ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ […]
ಉಡುಪಿ:ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಪಲ್ಸ್ ಪೊಲಿಯೋ ಕಾರ್ಯಕ್ರಮವು ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ […]