ಉಡುಪಿ:ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

ಉಡುಪಿ: ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದುಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015 ರಿಂದಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದಕಾರ್ಮಿಕರಿಗೆ […]

ಸೀಗಲ್ ಹಕ್ಕಿಯಲ್ಲಿ ಚೀನಾದ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ!

ಕಾರವಾರ, ಡಿ.18: ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್ ಪತ್ತೆಯಾಗಿದೆ. ಇದರಿಂದ ಕಾರವಾರದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ ಶಂಕೆ ವ್ಯಕ್ತವಾಗಿದೆ. ನೋಡಲು ಭಿನ್ನವಾಗಿ ಕಂಡ ಈ ಹಕ್ಕಿಯನ್ನ ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಮರೈನ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಹಕ್ಕಿಯನ್ನ ಹಿಡಿದು ಪರಿಶೀಲಿಸಿದ್ದಾರೆ. ಈ ವೇಳೆ ಸೀಗಲ್‌ನ ಬೆನ್ನಿನಲ್ಲಿದ್ದ ಜಿಪಿಎಸ್‌ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ […]

ಉಡುಪಿ:ಸಣ್ಣ ಕೈಗಾರಿಕಾ ಉತ್ಪನ್ನಗಳು ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಿಕವಾಗಿರಲು ಒತ್ತು ನೀಡಬೇಕು :ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳ ತಯಾರಿಕೆ ಮತ್ತು ಗುಣಮಟ್ಟ ಪರಿಸರಸ್ನೇಹಿ ಹಾಗೂ ಆರೋಗ್ಯದಾಯಕವಾಗಿರುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಪ್ರತೀಕ್ ಬಾಯಲ್ ಉದ್ದಿಮೆದಾರರಿಗೆ ಕರೆ ನೀಡಿದರು. ಅವರು ಬುಧವಾರ ನಗರದ ಕಡಿಯಾಳಿಯ ದಿ ಓಷ್ಯನ್ ಪರ್ಲ್ ಹೋಟೆಲ್‌ನಲ್ಲಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇನಿರ್ದೇಶನಾಲಯ, ಕೆ.ಸಿ.ಟಿ.ಯು ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು […]

ಉಡುಪಿ:ಮನೆ ಮನೆ ಭೇಟಿ ನೀಡುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ರಮೇಶ್ ಕಾಂಚನ್

ಉಡುಪಿ: ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತ ಮತ್ತು ಸ್ವಾವಲಂಬಿ ಬದುಕು ಹೊಂದಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಕಳೆದ 2.5 ವರ್ಷಗಳಿಂದ ರಾಜ್ಯವ್ಯಾಪಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಹಾಗೂಯೋಜನೆಗಳ ಪ್ರಗತಿ ಪರಿಶೀಲಿಸಲು “ನಮ್ಮ ನಡೆ ವಾರ್ಡ್ ಕಡೆಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ತಾಲೂಕುಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಬುಧವಾರ ನಗರದ ಪುರಭವನದಲ್ಲಿ ಕರ್ನಾಟಕ ರಾಜ್ಯ […]