ಉಡುಪಿ: ಎಳ್ಳಮಾವಾಸ್ಯೆ ಪ್ರಯುಕ್ತ ಕಡಲತೀರದಲ್ಲಿ ಸಹಸ್ರಾರು ಮಂದಿಯಿಂದ ಸಮುದ್ರಸ್ನಾನ

ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು ಎಳ್ಳಮಾವಾಸ್ಯೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು. ಮಲ್ಪೆ ಕಡಲತೀರದಲ್ಲಿ ಬೆಳ್ಳಂ ಬೆಳಗ್ಗೆ ಚುಮು ಚುಮು ಚಳಿಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಸಮುದ್ರಕ್ಕೆ ಇಳಿದು ಸ್ನಾನ ಮಾಡಿದರು. ಮುಂಜಾನೆ 3 ಗಂಟೆಯಿಂದಲೇ ಸಮುದ್ರಸ್ನಾನಕ್ಕೆ ಕಡಲತೀರ ಬಳಿ ಜನ ಸೇರಿದ್ದರು. ಉಡುಪಿ ನಗರ ಮಾತ್ರವಲ್ಲದೆ, ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಜನರು ಬಂದಿದ್ದರು. ಜನರ ಅನುಕೂಲಕ್ಕಾಗಿ ನೂರಾರು ವೈದಿಕರು ಹಾಜರಿದ್ದು, ಪಿಂಡಪ್ರದಾನದ ಸಂಪ್ರದಾಯಗಳನ್ನು ನಡೆಸಿಕೊಟ್ಟರು. ಪಿಂಡಪ್ರದಾನ ಮಾಡಿದ ಬಳಿಕ ಸಮುದ್ರದಲ್ಲಿ ಅರ್ಗ್ಯ ಬಿಟ್ಟು ಸ್ನಾನ ಮಾಡಿದರು. ಬಳಿಕ ಕಡಲ ತೀರದ […]
ಉಡುಪಿ:ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ -ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ.ಅಂತಹ ವಾಹನಗಳಿಗೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]
ಉಡುಪಿ:ವೃದ್ಧೆ ನಾಪತ್ತೆ

ಉಡುಪಿ: ಬಿಜೂರು ಗ್ರಾಮದ ಕಂಚಿಕಾನ ಎಂಬಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಕೆ ಲೀಲಾವತಿ ಭಟ್ಟ (71) ಎಂಬ ವೃದ್ಧೆಯು ಸುಮಾರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ಸಂಸ್ಕೃತ ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434 […]