ಮಾನಸಿ ಸುಧೀರ್ ಗೆ ಅಲೆವೂರು ಗ್ರೂಪ್ ಅವಾರ್ಡ್‌ ಪ್ರಶಸ್ತಿ ಪ್ರದಾನ

ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಅಲೆವೂರು ಗ್ರೂಪ್ ಅವಾರ್ಡ್‌ ಸ್ವೀಕರಿಸಿ ಅವರು ಮಾತನಾಡಿದರು. ಕಲಾವಿದನ ಯಶಸ್ಸಿನಲ್ಲಿ ನಿರ್ದೇಶಕರು, ಸಂಗೀತಗಾರರು, ಮೇಕಪ್ ಮ್ಯಾನ್, ಗೀತೆ ರಚನಾಕಾರರು, ತಂತ್ರಜ್ಞರು ಹೀಗೆ ಹಿಮ್ಮೇಳದಲ್ಲಿ ಹಲವರ […]

ಉಡುಪಿ: ಮೈಂಡ್ ಕ್ರಿಯೇಟಿವ್ ಸ್ಕೂಲ್’ನಲ್ಲಿ ದಾಖಲಾತಿ ಆರಂಭ.

ಉಡುಪಿ:ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಮೈಂಡ್ ಕ್ರಿಯೇಟಿವ್ ಸ್ಕೂಲ್ ನಲ್ಲಿ ಡಿ.20 ರಿಂದ ಜ.1 ರವರೆಗೆ ದಾಖಲಾತಿ ಆರಂಭವಾಗಲಿದೆ. ಸಂಪರ್ಕಿಸಿ:ಉಡುಪಿ4ನೇ ಮಹಡಿ, ರಾಜ್ ಟವರ್ಸ್, ಸಿಟಿ ಬಸ್ ನಿಲ್ದಾಣದ ಹತ್ತಿರ, ಉಡುಪಿ. ಈಗಲೇ ನೋಂದಾಯಿಸಿ:www.mind.ind.in+91 8139911828+91 7795318231 ಮಂಗಳೂರು4ನೇ ಮಹಡಿ, ಸಾನು ಪ್ಯಾಲೆಸ್, ಪಿವಿಎಸ್ ಸರ್ಕಲ್, ಎಂಜಿ ರಸ್ತೆ, ಮಂಗಳೂರು.

ಉಡುಪಿ:ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆ ಕುರಿತು ತರಬೇತಿ ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು […]

ಉಡುಪಿ:ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಡೋರ್ ಅಳವಡಿಕೆ ಕಡ್ಡಾಯ

ಉಡುಪಿ: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ನಿರ್ದೇಶನದಂತೆ ಮೋಟಾರು ವಾಹನ ನಿಯಮಾವಳಿಗಳನ್ವಯ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗೀ ಹಾಗೂ ಸರ್ಕಾರಿ ಬಸ್ಸುಗಳಲ್ಲಿ 2026 ರ ಜನವರಿ 20 ರ ಒಳಗಾಗಿ ಕಡ್ಡಾಯವಾಗಿ ಡೋರ್ ಅಳವಡಿಸಿ, ಕಾರ್ಯಾಚರಣೆ ಮಾಡುವಂತೆ ಎಲ್ಲಾ ಬಸ್ಸುಗಳ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ತಪ್ಪಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ನಾಳೆ (ಡಿ.21) ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಡಿ.21 ರಂದು ಬೆಳಿಗ್ಗೆ 8.00 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ […]