ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ; ವಾರ್ಷಿಕೋತ್ಸವ ಸಂಭ್ರಮ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಇದರ ವಾರ್ಷಿಕೋತ್ಸವ ಸಂಭ್ರಮ ನಡೆಯಿತು. ಬೆಳಿಗ್ಗೆ ಧ್ವಜಾರೋಹಣವನ್ನು SDMC ಅಧ್ಯಕ್ಷೆ ಶ್ರೀಮತಿ ಸಬೀನಾರವರು, ಅಧ್ಯಕ್ಷತೆಯನ್ನು ಪರ್ಕಳ ಪ್ರೌಢಶಾಲಾ ಸಂಚಾಲಕರಾದ ದಿನೇಶ್ ಹೆಗ್ಡೆ ಆತ್ರಾಡಿ ಇವರು ನೆರವೇರಿಸಿದರು. ನಂತರ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವನ್ನು ವಿತರಿಸಲಾಯಿತು. ವೇದಿಕೆಯಲ್ಲಿ SDMC ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ಶ್ಯಾಮಲಾ ಪ್ರಭು, ಅಬ್ದುಲ್ ರಹಿಮಾನ್, ಹಳೆ ವಿದ್ಯಾರ್ಥಿ ಅಶೋಕ್ ಕಾಂಚನ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಇಸ್ಮಾಯಿಲ್ ಆತ್ರಾಡಿ, ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ […]
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ 2025ರ ಸಮಾರೋಪ

ಉಡುಪಿ: ಯಕ್ಷಗಾನ ಕಲೆ, ಕಲಾವಿದರ ಹಿತದೃಷ್ಟಿಯಿಂದ ಉಡುಪಿಯ ಯಕ್ಷಗಾನ ಕಲಾರಂಗ ನಡೆಸುತ್ತಿರುವ ನಿಸ್ವಾರ್ಥ ಸೇವೆ ಇತರ ಕ್ಷೇತ್ರಗಳಿಗೆ ಮಾದರಿಯಾಗಿದೆ ಎಂದು ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಹೇಳಿದರು. ಅವರು ಗುರುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ -2025ರ ಸಮಾರೋಪದಲ್ಲಿ ಮಾತನಾಡಿದರು. ಉಡುಪಿಯ ಅಷ್ಟ ಮಠಗಳು ಕಲಾಪೋಷಣೆಯನ್ನು ನಿರಂತರ ನಡೆಸಿಕೊಂಡು ಬಂದಿವೆ. ಪ್ರಸ್ತುತ ತಮ್ಮ ಚತುರ್ಥ ವಿಶ್ವಗೀತಾ ಪರ್ಯಾಯದ ಎರಡು ವರ್ಷಗಳ ಈ ಅವಧಿಯಲ್ಲಿ ಈವರೆಗೆ 1700ಕ್ಕೂ ಅಧಿಕ ಕಾರ್ಯಕ್ರಮಗಳು ನಡೆದಿವೆ. […]
ಉಡುಪಿ:ಇ-ಖಾತಾ ಸೇವಾ ಶುಲ್ಕ ಪರಿಷ್ಕರಣೆ

ಉಡುಪಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಇ-ಖಾತಾ ಸೇವೆಗೆ ವಿಧಿಸುತ್ತಿರುವ ಶುಲ್ಕದ ಪೈಕಿ ಕರಡು ಇ- ಖಾತೆಗಳನ್ನು ಅಂತಿಮಗೊಳಿಸುವ ಸಂದರ್ಭದಲ್ಲಿ ರೂ. 10 ನ್ನು ಹಾಗೂ ಅಂತಿಮ ಇ-ಖಾತೆಯನ್ನು ನೀಡುವ ಸೇವೆಗೆ ರೂ. 25 ನ್ನು ಪಡೆದು ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಗೆ (ಕೆ.ಎಂ.ಡಿ.ಎಸ್) ಸಂದಾಯ ಮಾಡಲು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಆದೇಶಿಸಿದ್ದು, ಉಡುಪಿ ನಗರಸಭೆಯ ಆಡಳಿತಾಧಿಕಾರಿಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಈಗಿರುವ ಖಾತಾ ಶುಲ್ಕವನ್ನು 75 ರೂ.ನಿಂದ 125 ರೂ.ಗಳಿಗೆ ಪರಿಷ್ಕರಿಸಲು ಅನುಮೋದನೆ ನೀಡಲಾಗಿರುತ್ತದೆ. […]
ಉಡುಪಿ:ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ನಾಡ-ನುಡಿಯಾದ ಕನ್ನಡ ಭಾಷೆಯನ್ನು ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂಇತರೆ ಸಂಸ್ಥೆಗಳು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮಾತೃಭಾಷೆಯಾದ ಕನ್ನಡದ ಬಗ್ಗೆ ಅಭಿಮಾನ ಹೊಂದಿ, ದೈನಂದಿನ ಕಾರ್ಯಗಳಲ್ಲಿ ಹೆಚ್ಚಾಗಿ ಬಳಸಬೇಕು.ಜಿಲ್ಲೆಯಲ್ಲಿ ಉದ್ಯೋಗ ಅರಸಿ ಬಂದಿರುವ ಹೊರ ರಾಜ್ಯದ ಅನ್ಯ […]