ಚಂಡೀಗಢದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಐಪಿಎಸ್ ಅವರಿಗೆ ಹುಟ್ಟೂರ ನಾಗರಿಕ ಸನ್ಮಾನ.

ಹಿರಿಯಡಕ: ಭಾರತ ಮಾನವ ಸಂಪನ್ಮೂಲಭರಿತ ರಾಷ್ಟ್ರವಾಗಿದ್ದು ಅಪಾರ ಯುವ ಸಂಪತ್ತು ನಮ್ಮಲ್ಲಿದೆ. ಯುವಕರಿಗೆ ಅವಕಾಶ ಕೊಡುವ ಮೂಲಕ ಅವರನ್ನು ಬೆಳೆಸೋಣ ಎಂದು ಜ.ಪಿ.ವಿಶ್ವನಾಥ್ ಶೆಟ್ಟಿ ಹೇಳಿದರು. ಹಿರಿಯಡಕದ ಶ್ರೀವೀರಭದ್ರಸ್ವಾಮಿ ದೇವಸ್ಥಾನದ ವಠಾರದಲ್ಲಿ ರವಿವಾರ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯಡಕ ರಾಜೇಶ್ ಪ್ರಸಾದ್ ಐಎಎಸ್ ಅವರಿಗೆ ಹುಟ್ಟೂರ ನಾಗರಿಕ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಬೆಳವಣಿಗೆಗೆ ಸಮಾಜದ ಕೊಡುಗೆ ಮತ್ತು ಪರಿಸರದ ಕೊಡುಗೆ ಅಪಾರವಾಗಿದೆ. ಸಮಾಜದ ಕೊಡುಗೆಯಿಂದ ಬೆಳೆದ ನಾವು ಸಮಾಜಕ್ಕೆ […]

ಉಡುಪಿ: ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ 35 ನೇ ಮದ್ಯವ್ಯಸನ ವಿಮುಕ್ತಿ ಶಿಬಿರ – 2026 ಜನವರಿ 1 – 10 ತನಕ ಶಿಬಿರ ಆಯೋಜನೆ

ಉಡುಪಿ: ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ‌ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.1ರಂದು ಬೆಳಿಗ್ಗೆ 10.30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಜ.10ರಂದು ಬೆಳಿಗ್ಗೆ 10.30 ಕ್ಕೆ ಶಿಬಿರದ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು. ಶಿಬಿರಕ್ಕೆ […]

ಉಡುಪಿ: ಜಿಲ್ಲೆಯಲ್ಲಿ 28 ನಕ್ಸಲ್ ಪ್ರಕರಣಗಳು ವಿಲೇವಾರಿ.

ಉಡುಪಿ: ಜಿಲ್ಲೆಯಲ್ಲಿ 68 ನಕ್ಸಲ್‌ ಪ್ರಕರಣಗಳಲ್ಲಿ 39 ಪ್ರಕರಣಗಳು ಕೋರ್ಟ್ ವಿಚಾರಣೆಯಲ್ಲಿದ್ದು, 28 ಪ್ರಕರಣಗಳು ವಿಲೇವಾರಿ ಆಗಿವೆ. 1 ಪ್ರಕರಣದಲ್ಲಿ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲು ಬಾಕಿ ಇದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಹೆಚ್ಚುವರಿ ದಾಖಲಾತಿ ಸಲ್ಲಿಸಲು ಬಾಕಿ ಇದೆ. ಒಂದು ಪ್ರಕರಣ ಸಿಐಡಿ ತನಿಖೆಯಲ್ಲಿದೆ. ಕಳೆದ 6 ತಿಂಗಳಲ್ಲಿ 39 ಪ್ರಕರಣ ಗಳಲ್ಲಿ 11 ಜನ ನಕ್ಸಲ್‌ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. […]

ಉಡುಪಿ:ಡಿ.24 ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಬಳಕೆದಾರರ ವೇದಿಕೆ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 24 ರಂದು ಬೆಳಗ್ಗೆ 10 ಗಂಟೆಗೆ ನಗರದ ವಾದಿರಾಜ ರಸ್ತೆಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಸಂದೀಪ್ ಕುಮಾರ್ ಅಧ್ಯಕ್ಷತೆವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ […]

ಉಡುಪಿ:ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ವಿಜೃಂಭಣೆಯಿಂದ ಆಚರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಸಾಂಸ್ಕೃತಿಕ ಉತ್ಸವ ಆಯೋಜಿಸುವ ಕುರಿತು ಚರ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಅದರಲ್ಲೂ ವಿಶೇಷವಾಗಿ ಯುವಜನರು ಈ ಬಗ್ಗೆ ಉತ್ತೇಜಿಸುವರೀತಿಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ಉಡುಪಿ ನಗರದಲ್ಲಿ […]