ಉಡುಪಿ:ಮಂಜುನಾಥ್ ಮೋಟರ್ಸ್ ಮಾಲಕ ಕೆ.ನಾರಾಯಣ ಶೆಟ್ಟಿ ನಿಧನ

ಉಡುಪಿಯ ಪ್ರಖ್ಯಾತ ಸಾರಿಗೆ ಸಂಸ್ಥೆಯಾಗಿದ್ದ ಮಂಜುನಾಥ್ ಮೋಟರ್ಸ್ ನ ವ್ಯವಸ್ಥಾಪಕ ಕೆ. ನಾರಾಯಣ ಶೆಟ್ಟಿ ಬ್ರಹ್ಮಗಿರಿಯ ಸ್ವಗೃಹದಲ್ಲಿ ದಿ:24.12.2025 ರಾತ್ರಿ 12.15ಕ್ಕೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇವರು ಬಂಟ್ ಸಂಘದ ಪ್ರಥಮ ಅಧ್ಯಕ್ಷರಾಗಿ ಹಾಗೂ ಲಯನ್ಸ್ ಕ್ಲಬ್ ಉಡುಪಿ, ಸೀನಿಯರ್ ಸಿಟಿಜನ್ಸ್ ಇದರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಅಂತ್ಯ ಸಂಸ್ಕಾರ ಉಡುಪಿಯಲ್ಲಿ ಇಂದು ಜರುಗಲಿದೆ. ಇವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಉಡುಪಿ:ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ : ಡಾ. ತಿಪ್ಪೇಸ್ವಾಮಿ

ಉಡುಪಿ: ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಬೇಕು. ಸಭೆಗಳ ವರದಿಯನ್ನು ಒಂದು ವಾರದೊಳಗೆ ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು. ತಿಂಗಳಲ್ಲಿ ಒಂದು ದಿನ ಮಕ್ಕಳಿಗಾಗಿ ಮೀಸಲಿಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ತೆಗೆದುಕೊಂಡ ಕ್ರಮಗಳನ್ನು ನಿಯಮಿತವಾಗಿ ಆಯೋಗಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಹೇಳಿದರು. ಅವರು ಮಂಗಳವಾರ ನಗರದ […]