ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ; ಮುನ್ನೆಚ್ಚರಿಕೆ ಕ್ರಮ ಕಡ್ಡಾಯ ಪಾಲನೆಗೆ ಪೊಲೀಸರ ಸೂಚನೆ!

ಉಡುಪಿ: ಪುರಭವನದಲ್ಲಿ ಬುಧವಾರ ನಡೆದ ಜಿಲ್ಲೆಯ ಎಲ್ಲ ಹೊಟೇಲ್‌, ಲಾಡ್ಜ್, ಹೋಂಸ್ಟೇ ಹಾಗೂ ರೆಸಾರ್ಟ್‌ ಮಾಲಕರ ಸಭೆಯಲ್ಲಿ ಸಹಾಯಕ ಪೊಲೀಸ್‌ ಅಧೀಕ್ಷಕಿ ಡಾ| ಹರ್ಷ ಪ್ರಿಯಂವದ ಅವರು ಹೊಸ ವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳು ಹಾಗೂ ಪಾಲಿಸಬೇಕಾದ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಹೊಸ ವರ್ಷಾಚರಣೆ ಸಂದರ್ಭ ರಾತ್ರಿ 10ರ ರೊಳಗೆ ಧ್ವನಿವರ್ಧಕ ಬಳಕೆಯನ್ನು ಕಡ್ಡಾಯವಾಗಿ ನಿಲ್ಲಿಸಿ, ನಿಗದಿತ ಸಮಯದೊಳಗೆ ಎಲ್ಲ ಕಾರ್ಯಕ್ರಮಗಳನ್ನು ಮುಕ್ತಾಯ ಗೊಳಿಸಬೇಕು. ಅಬ್ಬರದ ಸಂಗೀತ, ಫೈರ್‌ಕ್ಯಾಂಪ್‌ಗ್ಳಿಂದ ನೆರೆಹೊರೆಯವರ ಶಾಂತಿಗೆ ಧಕ್ಕೆಯಾಗಬಾರದು […]

ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಂಬಳ ಸಮಿತಿ ಅಧ್ಯಕ್ಷ ಹಾಗೂ ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಕಂಬಳವು ಕರಾವಳಿಯ ಸಂಸ್ಕೃತಿಯ ವೈಶಿಷ್ಟ್ಯದ ಪ್ರತೀಕ. ಕಂಬಳದ ಅಸ್ಮಿತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆದಾಗ ಅದರ ವಿರುದ್ಧ ಸಿಡಿದೆದ್ದು ಆರಂಭವಾದ ಸಣ್ಣ ಪ್ರಯತ್ನವೇ ಮಂಗಳೂರು ಕಂಬಳವಾಗಿ 9 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಬೆಳಗ್ಗೆ 8.30 ಕ್ಕೆ ಉದ್ಘಾಟನೆ ನೆರವೇರಲಿದ್ದು, ಸಂಜೆ 6ಕ್ಕೆ ಸಭಾ ಕಾರ್ಯಕ್ರಮವಿದೆ ಎಂದರು. ಎಂ.ಆರ್‌.ಜಿ. ಗ್ರೂಪ್‌ನ ಸಿಎಂಡಿ ಹಾಗೂ ಕಂಬಳ ಸಮಿತಿಯ ಗೌರವಾಧ್ಯಕ್ಷ ಡಾ|ಕೆ. ಪ್ರಕಾಶ್‌ ಶೆಟ್ಟಿ […]

ಅತೀಯಾದ ಫಾಸ್ಟ್ ಫುಡ್ ಸೇವನೆ: 11ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು!

ದೆಹಲಿ: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಅತಿಯಾಗಿ ಫಾಸ್ಟ್ ಫುಡ್ ತಿಂದು 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಅಹಾನಾ ಎಂಬಾಕೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಅಹಾನಾ ಸುಮಾರು ದಿನಗಳಿಂದ ಹೊರಗಿನ ಆಹಾರಗಳನ್ನು ಹೆಚ್ಚು ಸೇವನೆ ಮಾಡಿದ ಕಾರಣ ಆಕೆಯ ಸ್ಥಿತಿ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿವೆ ಮತ್ತು ಅವರ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇದಕ್ಕೆ […]

ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಸಭಾ ಭವನ ನಿರ್ಮಾಣಕ್ಕೆ 50.00 ಲಕ್ಷ ಅನುದಾನ ಬಿಡುಗಡೆ.

ಕಾರ್ಕಳ: ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಲ್ಲೂರು ಗ್ರಾಮದ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣ ಕಾಮಗಾರಿಗೆ ರೂ 50.00 ಲಕ್ಷ ಅನುದಾನ ಮಂಜೂರಾಗಿದ್ದು ಅದರಲ್ಲಿ 25.00 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರವು ಜೈನ ಸಮುದಾಯದ ಐತಿಹಾಸಿಕ ಹೆಗ್ಗುರುತಾದ ಕಾರ್ಕಳ ಶ್ರೀ ಗೊಮ್ಮಟೇಶ್ವರ ಏಕಶಿಲಾ ಪ್ರತಿಮೆಗೆ ಮುಂದಿನ ವರ್ಷ 2027 ಜನವರಿಯಲ್ಲಿ 12 ವರ್ಷಗಳಿಗೆ ಒಮ್ಮೆ ನಡೆಯುವ ವಿಶ್ವ ವಿಖ್ಯಾತ, […]

ಚಿತ್ರದುರ್ಗ ಬಸ್ ದುರಂತ – 11 ಮಂದಿ ಸಜೀವ ದಹನ: ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ.

ಬೆಂಗಳೂರು: ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಸಜೀವ ದಹನಗೊಂಡಿದ್ದು, ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ […]