ಉಡುಪಿ:ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ:ಮೌಲ್ಯಗಳು ಮಾತ್ರ ನಮ್ಮನ್ನ ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ, ವಿದ್ಯಾರ್ಥಿಗಳು ಅಂಕಗಳಿಕೆಯ ಜೊತೆಗೆ ಉತ್ತಮ ಹವ್ಯಾಸಗಳನ್ನ ಅಳವಡಿಸಿಕೊಂಡು ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಹಾಗಾದಾಗ ಸರ್ವತೋಮುಖ ಬೆಳವಣಿಗೆ ಸಾಧ್ಯ, ಪ್ರತಿ ವಿಷಯವನ್ನು ಮನಸ್ಸಿಟ್ಟು ಕಲಿತಾಗ ಮಾತ್ರ ಆ ವಿಷಯ ಒಲಿಯುತ್ತದೆ ಎಂದು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ರಾಧಾಕೃಷ್ಣ ಐತಾಳ್ ಹೇಳಿದರು. ಅವರು ಇತ್ತೀಚಿಗೆ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು ಕಟಪಾಡಿಯ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ […]
ಉಡುಪಿ: 15 ದಿನಗಳೊಳಗೆ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತದಿದ್ದರೆ ಬೃಹತ್ ಪ್ರತಿಭಟನೆ- ಕೋಟದ ರೈತರ ಸಂಘಟನೆ ರೈತಧ್ವನಿ ಎಚ್ಚರಿಕೆ

ಉಡುಪಿ: ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಕೋಟದ ರೈತರ ಸಂಘಟನೆ ರೈತಧ್ವನಿಯ ಅಧ್ಯಕ್ಷ ಮಣೂರು ಜಯರಾಮ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯ ಪದಾಧಿಕಾರಿಗಳು ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು,15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. 15 ದಿನಗಳಲ್ಲಿ ಹೂಳೆತ್ತುವ ಪ್ರಕ್ರಿಯೆಗೆ ಸಕಾರಾತ್ಮಕ ಸ್ಪಂದನೆ […]
ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪಿಎಚ್‌ಪಿ, ಬಜರಂಗದಳದ ಕಾರ್ಯಕರ್ತರು ಸಾಗಿಬಂದರು. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಲಿನ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ದೀಪುಚಂದ್ರದಾಸ್ ಎಂಬ ಯುವಕ ನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ನಿಲ್ಲಬೇಕು. ಈ […]
ಉಡುಪಿ ಶ್ರೀ ಅನಂತೇಶ್ವರ ಚಂದ್ರಮೌಳೇಶ್ವರ ದೇವಾಲಯದಲ್ಲಿ ರಾಶಿ ಪೂಜೆ ಸಂಪನ್ನ

ಉಡುಪಿ: ಉಡುಪಿಯ ಶ್ರೀ ಅನಂತೇಶ್ವರ ಚಂದ್ರಮೌಳೇಶ್ವರ ದೇವಾಲಯದಲ್ಲಿ ರಾಶಿ ಪೂಜೆಯ ಅಂಗವಾಗಿ ಅಷ್ಟಾವಧಾನ ಸೇವೆಯು ನಡೆಯಿತು. ಇದರ ಅಂಗವಾಗಿ ಹೂವಿನ ತೊಟ್ಟಿಲಲ್ಲಿ ಉಭಯ ದೇವರ ಉತ್ಸವ ಮೂರ್ತಿಯನ್ನಿಟ್ಟು ತೊಟ್ಟಿಲು ಪೂಜೆಯನ್ನು ಮಾಡಲಾಯಿತು. ನಂತರ ಅಷ್ಟಾವಧಾನ ಸೇವೆಯಲ್ಲಿ ವೇದ, ಪುರಾಣ, ಜ್ಯೋತಿಷ್ಯ, ಸಂಗೀತ, ನೃತ್ಯ, ಸರ್ವವಾದ್ಯ ಸೇವೆಗಳು ಸಮರ್ಪಿತಗೊಂಡಿತು. ಇಂದು ಬೆಳಿಗ್ಗೆ ವೃಶ್ಚಿಕ ಲಗ್ನದಲ್ಲಿ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರಾಶಿಪೂಜೆಯು ಸಂಪನ್ನಗೊಂಡಿತು.
ಕೂಡಲೇ ಬೇಕಾಗಿದ್ದಾರೆ

ಗೋವಾದ ಪ್ರಸಿದ್ಧ ಹೋಟೆಲಿಗೆ ತಂದೂರಿ ಚೆಫ್, ಕ್ಯಾಪ್ಟನ್,ವೈಟರ್, ಹಾಗೂ ಕ್ಲೀನಿಂಗ್ ಗೆ ಜನ ಬೇಕಾಗಿದ್ದಾರೆ. ಉತ್ತಮ ವೇತನ ಮತ್ತು ವಸತಿ ಸೌಲಭ್ಯವಿದೆ. ಸಂಪರ್ಕಿಸಿ: 9481658030